ಅಮಿತ್ ಶಾ ವಿರುದ್ಧ ರಾಷ್ಟ್ರ ದ್ರೋಹ ಪ್ರಕರಣ ದಾಖಲಿಸಿ: ಯಲ್ಲಪ್ಪ ಹಳೇಮನಿ

ಕೊಪ್ಪಳ : ಪ್ರಜಾಪ್ರಭುತ್ವದ ಪಿತಾಮಹ ಡಾ. ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಷ್ಟ್ರ ದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡುವಂತೆ ರಾಷ್ಟ್ರಪತಿಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಕೋರ್ ಕಮಿಟಿ ಅಧ್ಯಕ್ಷರು ಹಾಗೂ ರಾಜ್ಯ ಸಂಘಟನಾ ಸಂಚಾಲಕ ಯಲ್ಲಪ್ಪ ಹಳೇಮನಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ
ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಖ್ಯ ದ್ವಾರದ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು ಮನವಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವರು ವಿರುದ್ಧ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವರ ವಿರುದ್ಧ ಕ್ರಮ ಕೈಗೊಂಡಿಲ್ಲ, ಇದನ್ನು ನೋಡಿದರೆ ಆರ್ ಎಸ್ ಎಸ್ ಅಜೆಂಡಾ ಇಡಲು ಹೊರಟಿದ್ದಾರೆ, ಬಡವರ ದಲಿತರ ಬಗ್ಗೆ ಚಿಂತನೆ ಮಾಡುತ್ತಿಲ್ಲ, ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳುವುದು ಒಂದು ಪ್ಯಾಶನ್ ಆಗಿದೆ ಇಷ್ಟು ಸಾರಿ ದೇವರ ಹೆಸರು ಜಪಿಸಿದರೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಸ್ವಲ್ಪ ಹಿಂಜರಿಕೆ ಇಲ್ಲದೆ ತನ್ನ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ, ಈತನ ದೇಶದ್ರೋಹಿ ಮಾತುಗಳನ್ನು ಖಂಡಿಸಬೇಕಾಗಿದ್ದ ಪ್ರಧಾನಿ ಮೋದಿ ಮತ್ತು ಆತನ ಸಚಿವ ಸಹದ್ಯೋಗಿಗಳು ಆತನ ಬೆನ್ನಿಗೆ ನಿಂತಿದ್ದಾರೆ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದುಕುತ್ತಿರುವ ಪ್ರತಿಯೊಬ್ಬರೂ ಕೂಡ ಇದನ್ನು ಖಂಡಿಸಲೇಬೇಕು, ಆದರೆ ಅಂಬೇಡ್ಕರ್ ಅವರ ಋಣದಿಂದ ಆಯ್ಕೆಯಾದ ರಾಜಕಾರಣಿಗಳು ಯಾವತ್ತೂ ಸಹ ಧ್ವನಿ ಎತ್ತಲೇ ಇಲ್ಲ,ಡಾ. ಅಂಬೇಡ್ಕರ್ ಅವರನ್ನು ಹಾಗೂ ಇಡೀ ದೇಶದ ಶೋಷಿತ ಸಮುದಾಯವನ್ನು ಅವಮಾನಿಸಿರುವ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು, ಅಂಬೇಡ್ಕರ್ ಬಗ್ಗೆ ಹಾಗೂ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಗೂಂಡ ಕಾಯ್ದೆ ಯಡಿ ಗಡಿಪಾರು ಮಾಡಬೇಕು, ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಸಹ ಕೇಂದ್ರ-ರಾಜ್ಯ ಸರ್ಕಾರ ಸರಿಯಾದ ದಿಟ್ಟ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಿಳಿಸಲಾಗಿದೆ.
ಪ್ರತಿಭಟನೆ ನೇತೃತ್ವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾಧ್ಯಕ್ಷ ಸಿ. ಕೆ. ಮರಿಸ್ವಾಮಿ ಬರಗೂರು, ಪ್ರಕಾಶ್ ಈರಾಪುರ್, ರಮೇಶ್ ಬೂದುಗುಂಪ, ಮಾರುತಿ ಹುಳಿಕಿಹಾಳ್, ಆಯುಬ್, ಪರಶುರಾಮ್, ಗಾಳೆಪ್ಪ, ಮಂಜುನಾಥ್ ಗೋಮಾರ್ಸಿ, ರವಿ ಗುಡ್ಲಾನೂರ್, ಮೂರ್ತಿ, ವೆಂಕಟೇಶ್ ಟಿ ಸೇರಿದಂತೆ ಅನೇಕರು ವಹಿಸಿದ್ದರು.
Comments are closed.