ಮೊರನಾಳ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯತಿ ಸಿಇಒ
ಮೊರನಾಳ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯತಿ ಸಿಇಒ
*ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ದತ್ತು ಗ್ರಾಮದ ವಿವಿಧ ಕಾಮಗಾರಿಗಳ ಪರಿಶೀಲನೆ*
*ಕೊಪ್ಪಳ* :-ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಮಾನ್ಯ ಸಂಸದರ ದತ್ತು ಗ್ರಾಮವಾಗಿ ಆಯ್ಕೆಯಾದ *ಬೆಟಗೇರಿ ಗ್ರಾಮ ಪಂಚಾಯತಿಯ ಮೊರನಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ರಾಹುಲ್ ರತ್ನಂ ಪಾಂಡೆಯ* ಭೇಟಿ ನೀಡಿ ಗ್ರಾಮೀಣ ಗೋದಾಮು, ಶಾಲಾ ಶೌಚಾಲಯ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಪರಿಶೀಲಿಸಿದರು.
ಮಹಾತ್ಮಾ ಗಾಂಧಿ ನರೇಗಾ ದತ್ತು ಗ್ರಾಮದ ಕ್ರಿಯಾ ಯೋಜನೆಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಪ್ರಾರಂಭಿಸಿ ಬರುವ ಮಾರ್ಚ-2025ರೊಳಗಾಗಿ ಮುಕ್ತಾಯಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗು ತಾಂತ್ರಿಕ ಸಹಾಯಕರಿಗೆ ಸೂಚಿಸಿದರು. ಕಾಮಗಾರಿಗಳು ಗುಣಮಟ್ಟದ್ದಾಗಿರಬೇಕು. ಗ್ರಾಮಸ್ಥರ ಸಂಪೂರ್ಣ ಸಹಕಾರದಿಂದ ಎಲ್ಲಾ ಕಾಮಗಾರಿಗಳು ಮುಕ್ತಾಯವಾಗಬೇಕು. ಯಾವುದೇ ರೀತಿಯಾಗಿ ಕಾಮಗಾರಿಗಳು ಅಪೂರ್ಣವಾಗುವಂತಿಲ್ಲವೆಂದರು. ಅಂದಾಜು ಪತ್ರಿಕೆಯಲ್ಲಿ ಕಾಣಿಸಿದಂತೆ ಐಟಂವಾರು ಕಾಮಗಾರಿಗಳು ಅನುಷ್ಠಾನಿಸಬೇಕೆಂದು ಕಟ್ಟು ನಿಟ್ಟಾಗಿ ಸೂಚಿಸಿದರು.
*ಶಾಲಾ ಮಕ್ಕಳ ಕಂಪ್ಯೂಟರ್ ಕಲಿಕಾ ಸಾಮಾರ್ಥ್ಯ ಪರಿವೀಕ್ಷಣೆ* :-ಮಕ್ಕಳ ಕಂಪ್ಯೂಟರ್ ಕಲಿಕಾ ಸಾಮಾರ್ಥ್ಯವನ್ನು ಇರುವ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8 ತರಗತಿಗೆ ವಿದ್ಯಾರ್ಥಿಗಳ ಕೊಠಡಿಗೆ ಭೇಟಿ ನೀಡಿ ಕಂಪ್ಯೂಟರ್ ಕಲಿಕಾ ಸಾಮಾರ್ಥ್ಯ ಇರುವ ಕುರಿತು ಪರಿವೀಕ್ಷಣೆ ಮಾಡಿದರು. ನಂತರ ಮಕ್ಕಳೊಂದಿಗೆ ಆರೋಗ್ಯ ತಪಾಸಣೆ ಜರುಗಿದ ಕುರಿತು ಚರ್ಚಿಸಿದರು. ಪ್ರತಿ ದಿನ ಆಹಾರ ವಿತರಣೆ, ಮೊಟ್ಟೆ ಇತ್ಯಾದಿ ವಿತರಣೆ ಕುರಿತು ಮುಕ್ತವಾಗಿ ಚರ್ಚಿಸಿದರು.
*ಶೌಚಾಲಯ ಪರಿಶೀಲಿಸಿದ ಸಿಇಒ*:-ಗ್ರಾಮದ ಓಣಿಯಲ್ಲಿರುವ ಮನೆಗೆ ಭೇಟಿ ನೀಡಿ ಶೌಚಾಲಯ ಇರುವ ಬಗ್ಗೆ ಮಾಹಿತಿ ಪಡೆದು ಪ್ರತಿ ದಿನ ಶೌಚಾಲಯ ಬಳಕೆ ಮಾಡುವಂತೆ ಮನವೋಲಿಸಿದರು. ಈಗಾಗಲೇ ಸರ್ಕಾರದಿಂದ ಪ್ರೋತ್ಸಾಹಧನ ವಿತರಿಸಿದ್ದು ನಿಮ್ಮ ಶೌಚಾಲಯವನ್ನು ಸ್ವಚ್ಚಗೊಳಿಸಿ ಅದನ್ನು ನಿಮ್ಮ ಕುಟುಂಬದ ಸದಸ್ಯರು ಕಡ್ಡಾಯವಾಗಿ ಬಳಕೆ ಮಾಡುವಂತೆ ಹೇಳಿದರು. ಶೌಚಾಲಯ ಬಳಕೆಯಿಂದ ನಮ್ಮ ಆರೋಗ್ಯ ಸುರಕ್ಷಿತ ಹಾಗು ಗ್ರಾಮದ ಸುತ್ತ-ಮುತ್ತಲೂ ನೈರ್ಮಲ್ಯ ವಾತಾವರಣ ಉಂಟಾಗುತ್ತದೆಂದರು.
*ಪದ್ಮಶ್ರೀ ಪುರಸ್ಕೃತ ಭೀಮವ್ವ ಮನೆಗೆ ಭೇಟಿ:* ತೊಗಲುಗೊಂಬೆ ಖ್ಯಾತಿಯಾದ ಮೋರನಾಳ ಗ್ರಾಮದ ಭೀಮವ್ವ ಶಿಳ್ಳಿ ಕ್ಯಾತರ ಮನೆಗೆ ಭೇಟಿ ನೀಡಿ ಅಭಿನಂದಿಸಿದರು. 1992ರಲ್ಲಿ ರಷ್ಯಾ, ಫ್ರಾನ್ಸ್, ಇಟಲಿ ದೇಶಗಳಲ್ಲಿ ಕಾರ್ಯಕ್ರಮ ನೀಡಿರುವ ಕುರಿತು ಭೀಮವ್ವ ವಿವರಿಸಿದರು. ವಿವಿಧ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವಂತೆ ಕುಟುಂಬದ ಸದಸ್ಯರು ಮನವಿ ಮಾಡಿದರು.
*ತೋಟಗಾರಿಕೆ ಕಾಮಗಾರಿ ವೀಕ್ಷಣೆ :* ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯಿಂದ ಬದು ಸುತ್ತಲೂ ತೆಂಗು ತೋಟ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಗ್ರಾಮ ಪಂಚಾಯತಿ ಸದಸ್ಯ ಅಂದಪ್ಪ ಚೀಲಗೋಡ, ಐಇಸಿ ಸಂಯೋಜಕ ದೇವರಾಜ ಪತ್ತಾರ ತಾಂತ್ರಿಕ ಸಂಯೋಜಕ ಯಮನೂರ, ತೋಟಗಾರಿಕೆ ಇಲಾಖೆ ಹೋಬಳಿ ಅಧಿಕಾರಿ ಬಸವರಾಜ, ಕಾರ್ಯದರ್ಶಿ ಮಂಜುನಾಥ, ತಾಂತ್ರಿಕ ಸಂಯೋಜಕಿ ಕವಿತಾ, ತಾಂತ್ರಿಕ ಸಹಾಯಕ ಪ್ರವೀಣ, ಬಿಎಪ್‌ಟಿ ಮಾಳಪ್ಪ ಹಾಗು ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.
Comments are closed.