ಅಲ್ಲಾನಗರ-ಗಿಣಿಗೆರಾ ಕಾರ್ಖಾನೆಯಲ್ಲಿ ಅಪಘಾತ: ಇಲಾಖೆ ಅಧಿಕಾರಿಗಳ ಭೇಟಿ

ಘಟನೆ ನಡೆದ ದಿನವೇ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ಮತ್ತು ತನಿಖೆ ಮಾಡಿ ಕ್ರಮ ತೆಗೆದುಕೊಂಡಿರುತ್ತಾರೆ. ಕಾರ್ಖಾನೆಯಲ್ಲಿನ ಸುರಕ್ಷತೆಯ ಕುರಿತು ಕ್ರಮ ತೆಗೆದುಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಕ್ರಮ ಮತ್ತು ಸುರಕ್ಷತಾ ಆಡಿಟ್ ಮಾಡಿಸಿ ಕೊಪ್ಪಳ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿಗೆ ವರದಿ ಸಲ್ಲಿಸಲು ಸೂಚಿಸುತ್ತಾ ಉತ್ಪಾದನಾ ಕಾರ್ಯವನ್ನು ಸ್ಥಗಿತಗೊಳಿಸಲು “ನಿಷೇದಾಜ್ಞೆ ಆದೇಶ” ನೀಡಿರುತ್ತಾರೆ. ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ಮತ್ತು ಕೊಪ್ಪಳ ಜಿಲ್ಲಾ ಉಸುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿರವರು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶಿಸಿರುತ್ತಾರೆ ಮತ್ತು ಮೃತ ಕಾರ್ಮಿಕರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ದೊರಕಿಸಲು ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.
ಕೊಪ್ಪಳ ಜಿಲ್ಲಾಡಳಿತವು ಭಾದಿತ ಕಾರ್ಮಿಕರ ಆರೋಗ್ಯ ಮತ್ತು ಕಾರ್ಖಾನೆಯಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಕಾರ್ಖಾನೆಗಳು, ಬಾಯ್ಲರುಗಳು, ಸುರಕ್ಷತಾ ಮತ್ತು ಸ್ವಾಸ್ಥ್ಯ ಇಲಾಖೆಯ ಹುಬ್ಬಳ್ಳಿ ವಲಯದ ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ರವೀಂದ್ರನಾಥ ಏನ್.ರಾಠೋಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.