ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ – ಜಿಲ್ಲಾಧಿಕಾರಿ ನಲಿನ್ ಅತುಲ್

0

Get real time updates directly on you device, subscribe now.

ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025
ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳು ಕಂಡುಬಂದ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
 ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025ರ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕುಷ್ಠರೋಗ ಪ್ರಕರಣಗಳು ಪತ್ತೆಯಾದ ಪ್ರದೇಶ, ವಾರ್ಡುಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಕುಷ್ಠರೋಗ ಸಂಪೂರ್ಣ ವಾಸಿಯಾಗಬಲ್ಲ ರೋಗವಾಗಿದ್ದು, ವೈಜ್ಞಾನಿಕವಾಗಿ ನಿರಂತರ ಚಿಕಿತ್ಸೆಯ ಅಗತ್ಯವಿದೆ ಎಂಬುದನ್ನು ರೋಗಿಗೆ ಹಾಗೂ ರೋಗಿಯ ಕುಟುಂಬಕ್ಕೆ ಮನದಟ್ಟು ಮಾಡಬೇಕು. ರೋಗದ ಲಕ್ಷಣಗಳು ಕಂಡುಬರುವವರಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮೂಲಕ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ಆಶ್ರಮ ಶಾಲೆ, ಹಾಸ್ಟೆಲ್‌ಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲೆಗಳಲ್ಲಿನ ಪ್ರರ್ಥನೆ ಸಂದರ್ಭದಲ್ಲಿ ರೋಗದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಕಂಡುಬಂದ ಕುಷ್ಠರೋಗ ಪ್ರಕರಣ, ರೋಗಿಯ ಚಿಕಿತ್ಸೆ, ನಿರಂತರ ಚಿಕಿತ್ಸೆಯ ನಂತರ ಗುಣಮುಖರಾದ ಬಗ್ಗೆ ದೃಢೀಕರಣ, ರೋಗಿಗಳಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳು ದೊರೆತಿರುವ ಬಗ್ಗೆ ಹಾಗೂ ನಿರಂತರ ಚಿಕಿತ್ಸೆ ನಂತರ ಅಥವಾ ಸಮರ್ಪಕ ಚಿಕಿತ್ಸೆಯ ಕೊರತೆಯಿಂದಾಗಿ ರೋಗ ವಾಸಿಯಾಗದೆ ಇರುವ ಕುರಿತಾಗಿ 5 ವರ್ಷಗಳ ಒಟ್ಟಾರೆ ತಾಲ್ಲೂಕುವಾರು ವರದಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ ಪ್ರಕಾಶ ಹೆಚ್. ಅವರು ಮಾತನಾಡಿ, ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ವರ್ಷದ ಘೋಷ ವಾಕ್ಯ “ಒಟ್ಟಾಗಿ ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಬಾಧಿತರಾದ ಎಲ್ಲರನ್ನು ಹಿಂದುಳಿಯAತೆ ನೋಡಿಕೊಳ್ಳೋಣ” ಎಂಬುದಾಗಿದೆ. ಜನರಲ್ಲಿ ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು ಹಾಗೂ ದೇಹದ ಮೇಲೆ ಯಾವುದೇ ಅಸಹಜ ವ್ಯತ್ಯಾಸಗಳು ಕಂಡುಬಂದಲ್ಲಿ ಅಂತಹವರಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡುವಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ-2025ರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಲಿಂಗರಾಜು ಟಿ., ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪ್ರಕಾಶ ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಶಶೀಧರ್ ಎ., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರಾಮಾಂಜನೇಯ, ಡಾ.ಗೌರಿಶಂಕರ ಹಾಗೂ ಡಾ.ಅಮರೇಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಸೇರಿದಂತೆ ಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!