ರಾಷ್ಟ್ರೀಯ ಸ್ವಚ್ಛತಾ ದಿವಸ
ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕೊಪ್ಪಳ ನಗರ ಸಭೆ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಹತ್ತಿರ “ರಾಷ್ಟ್ರೀಯ ಸ್ವಚ್ಛತಾ ದಿವಸ ಕಾರ್ಯಕ್ರಮ ನಡೆಯಿತು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಸಂಗಪ್ಪ ದರಗದ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.![]()
ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು “ರಾಷ್ಟ್ರೀಯ ಸ್ವಚ್ಛತಾ ದಿನ ಅಂತ ಆಚರಿಸಲಾಗುತ್ತದೆ. ಈ ಕಾರ್ಯಕ್ರಮದ “ಮುಖ್ಯ ಉದ್ದೇಶ ಅಂತರಂಗ ಮತ್ತು ಬಹಿರಂಗದ ಸ್ವಚ್ಛತೆಯನ್ನು ಮಾಡಿಕೊಳ್ಳುವುದನ್ನು ನೆನಪಿಸುವ ಕಾರಣಕ್ಕಾಗಿ ಆಚರಿಸಲಾಗುತ್ತದೆ. ನಾವೆಲ್ಲರೂ ಕೇವಲ ಬಹಿರಂಗದ ಸ್ವಚ್ಛತೆಗೆ ಗಮನ ಕೊಡದೆ ಅಂತರಂಗವನ್ನು ಸಹ ಸ್ವಚ್ಛವಾಗಿಟ್ಟುಕೊಳ್ಳುವುದಾಗಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು, ಅಧಿಕಾರಿ, ಸಿಬ್ಬಂದಿಗಳು ಮತ್ತು ಪೌರಕಾರ್ಮಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Comments are closed.