ಸಖಿ ಒನ್ ಸ್ಟಾಪ್ ಸೆಂಟರ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ
: ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.ಈ ಆಯ್ಕೆ ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ರಜೆ ದಿನಗಳನ್ನು ಹೊರತುಪಡಿಸಿ ಫೆಬ್ರವರಿ 7 ರವರೆಗೆ ಅಭ್ಯರ್ಥಿಗಳು ಲಿಖಿತ ರೂಪದಲ್ಲಿ ಕಛೇರಿಯ ಸಮಯದಲ್ಲಿ ಸಲ್ಲಿಸಬೇಕು. ನಂತರ ಬಂದಂತಹ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಮಿಷನ್ ಶಕ್ತಿ ಯೋಜನೆಯ ಪರಿಶೀಲನಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.