ಬಹದ್ದೂರುಬಂಡಿ ಏತ ನೀರಾವರಿಯಿಂದ  ನಮ್ಮ ಭಾಗದ ರೈತರಿಗೆ ಅನುಕೂಲವಾಗಲಿದೆ – ಶಿವರಾಜ ತಂಗಡಗಿ

0

Get real time updates directly on you device, subscribe now.

ಕೊಪ್ಪಳ ಜನವರಿ 31 : ಬಹದ್ದೂರುಬಂಡಿ ಏತ ನೀರಾವರಿಯಿಂದ ನಮ್ಮ ಭಾಗದ ರೈತರಿಗೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಮಣ್ಣು ಫಲವತ್ತಾಗಿರುವುದರಿಂದ ಇಂಥಹ ಮಣ್ಣಿಗೆ ನೀರು ಬಂದು ಬಿಟ್ಟರೆ ರೈತನ ಬದುಕು ಬಂಗಾರವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಹೇಳಿದರು.
ಅವರು ಶುಕ್ರವಾರ ಮುಂಡರಗಿ ಜಾಕವೆಲ್ ಪಾಯಿಂಟ್ ಹತ್ತಿರ ಬಹದ್ದೂರ್ ಬಂಡಿ ನವಲಕಲ್ ಏತ ನೀರಾವರಿ ಯೋಜನೆ  ಪಂಪ್‌ಹೌಸ್‌ನ ಪ್ರಾಯೋಗಿಕ ಚಾಲನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.
2018 ರಲ್ಲಿ ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆಗೆ ಅಡಿಗಲ್ಲು ಹಾಕಲಾಗಿತ್ತು. ಬಹುದಿನಗಳ ಕನಸು ಈಗ ನನಸಾಗಿದೆ. ನಮ್ಮ ಶಾಸಕರು ನಾವು ಮೊನ್ನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ 236 ಕೋಟಿ ಹಣ ಈ ಯೋಜನೆ ಫಿಡರ್ ಚನಾಲ್‌ಗಾಗಿ ಮಂಜೂರ ಮಾಡಿಸಿದ್ದೆವೆ. ನಮ್ಮ ರೈತರು ನೆಮ್ಮದಿಯಿಂದ ಇರಬೇಕು. ಅಧಿಕಾರ ಬರುತ್ತೆ ಹೋಗುತ್ತದೆ ಅಧಿಕಾರ ಇದ್ದಾಗ ಒಳ್ಳೆಯ ಕೆಲಸ ಮಾಡಬೇಕು. ನಾನು ಮೊದಲು ಕೆರೆ ತುಂಬಿಸುವ ಯೋಜನೆ ಕನಕಗಿರಿಯಿಂದಲೆ ಆರಂಭಿಸಿದ್ದೆ. ಬಳಿಕ ಎಲ್ಲಾ ಕಡೆ ಈ ಯೋಜನೆ ಆರಂಭಿಸಲಾಯಿತು. ಇದರಿಂದ ರೈತರಿಗೆ ಬಹಳ ಅನುಕೂಲವಾಗಿದೆ ಎಂದು ಹೇಳಿದರು.
ಬರುವ ದಿನಗಳಲ್ಲಿ ನನ್ನ ಕ್ಷೇತ್ರದಲ್ಲಿ ತೋಟಗಾರಿಕೆ ಪಾರ್ಕ್ ಮಾಡುತ್ತೆನೆ. ಇದು ಮಾತ್ರವಲ್ಲದೆ ಸಿಂಗಟಾಲೂರು ಯೋಜನೆ ಮುಗಿಸಿ ರೈತರಿಗೆ ನೀರು ಕೊಡುವ ಕೆಲಸ ಮಾಡುತ್ತೆವೆ. ಗಿಣಿಗೇರಾ ಕೆರೆ ತುಂಬಿಸುವ ಯೋಜನೆ ವಿಚಾರ ಪ್ರಸ್ತಾಪ ಮಾಡಲಾಗಿದೆ. ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆಯಿಂದ 17 ಗ್ರಾಮಗಳ ವ್ಯಾಪ್ತಿಯ 12,988 ಎಕರೆ ಪ್ರದೇಶದ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆ ಈ ಭಾಗದ ರೈತರ ಬಹುದಿನಗಳ ಹೋರಾಟದ ಫಲವಾಗಿದೆ. ನೀರಾವರಿಯಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ. ಸಿಂಗಟಾಲೂರು ಏತ ನೀರಾವರಿಯಿಂದ 90 ಸಾವಿರ ಎಕರೆ ಜಮೀನು  ನೀರಾವರಿಯಾಗಲಿದೆ. ಬಹದ್ದೂರುಬಂಡಿ-ನವಲಕಲ ಏತ ನೀರಾವರಿ ಯೋಜನೆಗೆ 188 ಕೋಟಿ ರೂ. ಹಾಗೂ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಗೆ 88 ಕೋಟಿ ರೂ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಒಂದೇ ಸಲಕ್ಕೆ ಈ ಯೋಜನೆಗಳಿಗೆ ಚಾಲನೆ ನೀಡಿದ್ದರು ಎಂದು ಹೇಳಿದರು.
ಬಹದ್ದೂರ್ ಬಂಡಿ ಏತ ನೀರಾವರಿ ಕೆನಾಲ ಕೆಲಸಕ್ಕೆ ರೂ. 256 ಕೋಟಿ ಹಣ ಮಂಜೂರು ಮಾಡಲಾಗಿದೆ. ರೈತರ ಪರವಾಗಿ ಕೆಲಸ ಮಾಡಿದಾಗ ಹೊಲಗಳಿಗೆ ನೀರಾವರಿ ಆಗುತ್ತವೆ. ನೀರಾವರಿ. ಆರೋಗ್ಯ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಜೊತೆಗೆ ದೂರದೃಷ್ಟಿ ಕೋನ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೆವೆ. ಇದೇ ತಿಂಗಳಲ್ಲಿ 450 ಬೆಡ್ಡಿನ ಆಸ್ಪತ್ರೆ ಲೋಕಾರ್ಪಣೆ ಮಾಡುವ ಕೆಲಸ ಮಾಡುತ್ತಿದ್ದೆವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್. ಮಾಜಿ ಸಂಸದರಾದ ಸಂಗಣ್ಣ ಕರಡಿ. ಮಾಜಿ. ಶಾಸಕರಾದ ಕೆ.ಬಸವರಾಜ ಹಿಟ್ನಾಳ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಗೂಳಪ್ಪ ಹಲಗೇರಿ ಮಾತನಾಡಿದರು.
ಈ ಸಂದರ್ಭದಲ್ಲಿ  ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ. ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ. ನೀರಾವರಿ ಕೇಂದ್ರ ವಲಯ ಕೆ.ಎನ್.ಎನ್.ಎಲ್ ಮುನಿರಾಬಾದ ಮುಖ್ಯ ಇಂಜಿನಿಯರ್ ಹನುಮಂತಪ್ಪ ದಾಸರ. ಅಧೀಕ್ಷಕ ಇಂಜಿನಿಯರ್ ಬಸವರಾಜ. ಕಾರ್ಯಪಾಲಕ ಇಂಜಿನಿಯರ್ ಗಿರೀಶ್. ಕೃಷ್ಣ ರೆಡ್ಡಿ. ಗಾಳಪ್ಪ ಪೂಜಾರಿ. ಯಂಕಪ್ಪ ಸೇರಿದಂತೆ ರೈತರು ಹಾಗೂ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
****

Get real time updates directly on you device, subscribe now.

Leave A Reply

Your email address will not be published.

error: Content is protected !!