ಫೆ.06ರಂದು ಕೌಶಲ್ಯ ರೋಜ್‌ಗಾರ್, ಉದ್ಯೋಗಮೇಳ
: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಮತ್ತು ಜಿಲ್ಲಾಕೌಶಲ್ಯ ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ರೋಜ್‌ಗಾರ್ ಮತ್ತು ಉದ್ಯೋಗಮೇಳವನ್ನು ಫೆಬ್ರವರಿ 06ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಉದ್ಯೋಗ ಮೇಳದಲ್ಲಿ 18 ರಿಂದ 45 ವರ್ಷ ವಯೋಮಿತಿಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮ, ಬಿ.ಇ, ಹಾಗೂ ಇತರೆ ಯಾವುದೇ ವಿದ್ಯಾರ್ಹತೆ ಹೊಂದಿದ ಯುವಕ ಯುವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳೊಂದಿಗೆ ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ..
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಛೇರಿ ಅಥವಾ ಜಿಲ್ಲಾ ಪಂಚಾಯತ್ ಕಛೇರಿ ಜಿಲ್ಲಾಡಳಿತ ಭವನ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.