ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರ ಪ್ರವಾಸ ಕಾರ್ಯಕ್ರಮ
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಫೆಬ್ರವರಿ 5ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 11.30 ಗಂಟೆಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣಕ್ಕೆ ಆಗಮಿಸಿ, ಕುಷ್ಟಗಿ ತಾಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30ಕ್ಕೆ ಅಲ್ಲಿಂದ ನಿರ್ಗಮಿಸಿ, 12.45 ಗಂಟೆಗೆ ಹಿರೇಮನ್ನಾಪುರ ಗ್ರಾ.ಪಂ ವ್ಯಾಪ್ತಿಯ ಹಂಚಿನಾಳು ಗ್ರಾಮದಲ್ಲಿ ನಾಗಮ್ಮ ದೊಡ್ಡಯ್ಯ ಹಿರೇಮಠ ರವರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಆರಂಭಿಸಿರುವ ಬಟ್ಟೆ ಅಂಗಡಿಗೆ ಭೇಟಿ ಮಾಡುವರು ಹಾಗೂ ಸಮಸ್ತ ಗ್ರಾಮಸ್ಥರೊಂದಿಗೆ ಗೃಹಲಕ್ಷ್ಮಿ ಯೋಜನೆ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಸಂಬಂಧ ಮುಕ್ತವಾಗಿ ಚರ್ಚೆ ನಡೆಸುವರು. ಅಲ್ಲಿಂದ ಕುಷ್ಟಗಿಗೆ ಆಗಮಿಸಿ, ಅಂದು ಮಧ್ಯಾಹ್ನ 2.15ಕ್ಕೆ ಕುಷ್ಟಗಿಯಿಂದ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳಸುವರು ಎಂದು ಅವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.