ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಸಿದ್ರಾಮೇಶ್ವರ

0

Get real time updates directly on you device, subscribe now.

ಫೆಬ್ರವರಿ 25ರಂದು ಜಿಲ್ಲಾ ಕೇಂದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸೂಚನೆ ನೀಡಿದರು.
 ಅವರು ಸೋಮವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್-2ರ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸಮಾಜದ ಮುಖಂಡರ ಕೋರಿಕೆಯ ಮೇರೆಗೆ ಕೊಪ್ಪಳ ಜಿಲ್ಲಾ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ಫೆ.19ರ ಬದಲಿಗೆ ಫೆ. 25ರಂದು ಆಯೋಜಿಸಲಾಗುವುದು. ಅಂದು 10.30 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪೂಜೆ, ಛತ್ರಪತಿ ಶಿವಾಜಿ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ. ವೇದಿಕೆ ಕಾರ್ಯಕ್ರಮದ ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೇರವಣಿಗೆಯು ಸಾಹಿತ್ಯ ಭವನದಿಂದ ಪ್ರಾರಂಭಗೊಂಡು ಜವಾಹರ ರಸ್ತೆ ಮೂಲಕ ಗಡಿಯಾರ ಕಂಬದ ಹತ್ತಿರದ ಕೋಟೆ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ವೃತ್ತದ ವರೆಗೆ ಜರುಗಲಿದೆ ಎಂದರು.
ಸಮಾರಂಭ ದಿನದಂದು, ಸಾಹಿತ್ಯ ಭವನ ಮತ್ತು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಈ ಜಯಂತಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಗ್ರಾಮ ಪಂಚಾಯತ್ ಮತ್ತು ಇತರೆ ಕಛೇರಿಗಳಲ್ಲಿ ಆಚರಿಸುವಂತಾಗಬೇಕು. ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಯಂತಿ ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್, ಛತ್ರಪತಿ ಶಿವಾಜಿ ಮಹಾರಾಜ (ಮರಾಠ) ಸಮಾಜದ ಮುಖಂಡರಾದ ಮಾರುತಿ ಎನ್., ಫಕೀರಪ್ಪ ಆರೇರ್, ಉಮೇಶ ಸುರ್ವೆ, ಚಂದ್ರಪ್ಪ ಬಡಿಗೇರ, ರಮೇಶ ಘೋರ್ಪಡೆ, ಪ್ರಾಣೇಶ ಕಂಪ್ಲಿ, ಹನುಮಂತ ಕಾರಟಗಿ, ಬಸವರಾಜ ಕಂಪ್ಲಿ, ಮಹಾಂತೇಶ, ಪ್ರತಾಪ ಬಡಿಗೇರ ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!