ಸಿರಾಜ್ ಬಿಸರಳ್ಳಿ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ

0

Get real time updates directly on you device, subscribe now.

ಕೊಪ್ಪಳ : ಜಿಲ್ಲೆಯ ಹಿರಿಯ ಪತ್ರಕರ್ತ, ಹೋರಾಟಗಾರ ಕವಿ, ಸಿರಾಜ್ ಬಿಸರಳ್ಳಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಮುದ್ರಣ, ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾದ್ಯಮಗಳಲ್ಲಿ ಕೆಲಸ ಮಾಡಿರುವ ಸಿರಾಜ್ ಬಿಸರಳ್ಳಿಯವರು ಮಾಧ್ಯಮ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಅವರಿಗೆ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗಿದೆ.

2023 ಮತ್ತು 2024 ನೇ ಸಾಲಿನ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನ ಐಐಎಸ್‌ಸಿ ಆವರಣದಲ್ಲಿರುವ ಜೆ ಎನ್‌ ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕ ಬಿಡುಗಡೆ ಮಾಡಿ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಜಿಲ್ಲೆಯ ಕೆ. ಮಲ್ಲಿಕಾರ್ಜುನ್, ೨೦೨೪ನ ಸಾಲಿಗೆ ಹೆಚ್ಚ.ಎಸ್. ಹರೀಶ ರಿಗೆ ಹಾಗೂ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಯನ್ನು ಯುವ ಪತ್ರಕರ್ತ ಅಖಿಲ್ ಹುದೇವ್ ರಿಗೇ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್‌, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್‌ ನಿಂಬಾಳ್ಕರ್‌, ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಬಿ ಬಿ ಕಾವೇರಿ, ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ, ಅಕಾಡೆಮಿಯ ಸದಸ್ಯರು, KUWJ ಅಧ್ಯಕ್ಷರಾದ ಶಿವಾನಂದ್ ತಗಡೂರ್ , ಕೆ.ನಿಂಗಜ್ಜ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!