ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ

ಸಹಾಯವಾಣಿಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಿಗೆದೂರು ನೀಡಬಹುದು. ಸೂಕ್ಷ್ಮ ಹಣಕಾಸು ಸಂಸ್ಥೆ (MFI) ,ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಹಾಯವಾಣಿ ಸಂಖ್ಯೆ 14448 ಗೆ ಮಾಹಿತಿ ನೀಡಬಹುದು.ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902 ಸಂಪರ್ಕಿಸಬಹುದು.ಡಾ.ಶಾಲಿನಿ ರಜನೀಶ್ಮುಖ್ಯ ಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ
Comments are closed.