ಡಾ.ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ
: ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಡಾ.ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.![]()

2025-26ನೇ ಸಾಲಿನ ಎಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಂ ರವರ 118ನೇ ಜನ್ಮ ದಿನಾಚರಣೆ ಮತ್ತು ಎಪ್ರಿಲ್ 14ರಂದು ಡಾ. ಬಿ.ಆರ್.ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2025-26ನೇ ಸಾಲಿನ ಡಾ.ಬಾಬು ಜಗಜೀವನ ರಾಂ ರವರ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಪ್ರಶಸ್ತಿಗಾಗಿ ನಿಗದಿತ ನಮೂನೆಯಲ್ಲಿರುವ ಅರ್ಜಿ ಹಾಗೂ ದಾಖಲೆಗಳೊಂದಿಗೆ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ, ಯಲಬುರ್ಗಾ, ಕುಷ್ಟಗಿ, ಗಂಗಾವತಿ, ಈ ಕಛೇರಿಗೆ ಫೆಬ್ರವರಿ 19ರ ಸಂಜೆ 5.30 ರೊಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಅರ್ಜಿ ಸ್ವೀಕರಿಸುವುದಿಲ್ಲವೆಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿದೇರ್ಶಕರು ಪ್ರಕಟಣೆ ತಿಳಿಸಿದ್ದಾರೆ.
Comments are closed.