ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು…
ಕೊಪ್ಪಳ: ತಾಲ್ಲೂಕಿನ ಚಿಕ್ಕಬಗನಾಳ ಗ್ರಾಮದ ಸಮೀಪದ ಹುಲಿಗೆಮ್ಮ ದೇವಿ ಡಾಬಾ ಬಳಿ ವೇಗವಾಗಿ ಚಲಿಸುತ್ತಿದ್ದ ಸಿವಿಲ್ ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಯುವಕ ಸಾವನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.
ಸಾವನಪ್ಪಿದ ಯುವಕನನ್ನು ಭೀಮೇಶ ತಂದೆ ಹನುಮಂತಪ್ಪ ಚನ್ನದಾಸರ (19) ಎಂದು ಗುರುತಿಸಲಾಗಿದೆ. ಎಂದಿನಂತೆ ತನ್ನ ಜಮೀನಿಗೆ ಹೋಗಿ ಬರುತ್ತಿದ್ದನು ಇಂದು ಬೆಳಿಗ್ಗೆ ಜಮೀನಿಗೆ ತೆರಳಿ ಮನೆಗೆ ಹೋಗುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ಡಾಬಾ ಬಳಿ ವೇಗವಾಗಿ ಚಲಿಸುತ್ತಿದ್ದ ಸಿವಿಲ್ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಲಾರಿ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಮುನಿರಾಬಾದ್ ಪಿಎಸ್ಐ ಸುನೀಲ್ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Comments are closed.