ದೇಶಪಾಂಡೆ ಪೌಂಡೇಶನ್ ಜೊತೆ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಒಡಂಬಡಿಕೆ

Get real time updates directly on you device, subscribe now.

ವಿದ್ಯಾರ್ಥಿಗಳ ಔದ್ಯೋಗಿಕ ಕೌಶಲಾಭಿವೃದ್ಧಿಯನ್ನು ಹೆಚ್ಚಿಸಲು ದೇಶಪಾಂಡೆ ಪೌಂಡೇಶನ್ ಜೊತೆ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ
ಒಡಂಬಡಿಕೆ

ಗಂಗಾವತಿ: ವೇಗವಾಗಿ ಬದಲಾಗುತ್ತಿರುವ ತಾಂತ್ರಿಕ ಜಗತ್ತಿನಲ್ಲಿ ಔದ್ಯೋಗಿಕ ಕೌಶಲ್ಯಗಳನ್ನು ಹೊಂದಿರುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದು, ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳಿಗೆ ಇಂತಹ ಅವಕಾಶಗಳು ಕಡಿಮೆ ಇರುವ ಅಂಶವನ್ನು ಪರಿಗಣಿಸಿ ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಯನ್ನು ಹೆಚ್ಚಿಸಲು ಶ್ರೀ ವಿದ್ಯಾನಿಕೇತನ ಪದವಿ ಕಾಲೇಜು ವಡ್ಡರಹಟ್ಟಿ, ಗಂಗಾವತಿ ಸಂಸ್ಥೆಯು “ಭಾರತದ ಬೆಳವಣಿಗೆಯ ಭಾಗವಾಗಿ ಗ್ರಾಮೀಣ ಯುವಕರನ್ನು ಸಬಲೀಕರಣಗೊಳಿಸುವ” ಸದುದ್ಧೇಶವನ್ನು ಹೊಂದಿರುವ ರಾಜ್ಯದಲ್ಲಿಯೇ ಅತ್ಯಂತ ಹೆಸರಾಂತ ಕೌಶಲಾಭಿವೃದ್ಧಿ ತರಬೇತಿ ಸಂಸ್ಥೆಯಾದ ದೇಶಪಾಂಡೆ ಪೌಂಡೇಶನ್ ಹುಬ್ಬಳ್ಳಿ ಇವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ವಿದ್ಯಾನಿಕೇತನ ಸಮೂಹ ಸಂಸ್ಥೆಯ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು ತಿಳಿಸಿದ್ದಾರೆ.

ದೇಶಪಾಂಡೆ ಪೌಂಡೇಶನ ಸಹಯೋಗದಲ್ಲಿ ವಿದ್ಯಾನಿಕೇತನ ಪದವಿ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಔದ್ಯೋಗಿಕ ಕೌಶಲ್ಯಗಳನ್ನು ಹೆಚ್ಚಿಸುವ ತರಬೇತಿಯನ್ನು ನೀಡಿ, ಉದ್ಯೋಗಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸುವ ಉದ್ದೇಶದಿಂದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಇದಲ್ಲದೆ ಇತರೆ ಕಾಲೇಜುಗಳಲ್ಲಿ ಅಧ್ಯಯನ ಮಾಡಿದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳೂ ಸಹ ಔದ್ಯೋಗಿಕ ಕೌಶಲ್ಯಗಳನ್ನು ಹೆಚ್ಚಿಸುವ ತರಬೇತಿಯನ್ನು ನಮ್ಮ ಕಾಲೇಜಿನ ಮೂಲಕ ಪಡೆದುಕೊಳ್ಳಬಹುದಾಗಿದ್ದು, ಗ್ರಾಮೀಣ ಪ್ರದೇಶದ ಹೆಚ್ಚು ವಿದ್ಯಾರ್ಥಿಗಳು ಇದರ ಅನುಕೂಲವನ್ನು ಪಡೆದುಕೊಳ್ಳಬೇಕೆಂದು ನೆಕ್ಕಂ ಟಿ ಸೂರಿಬಾಬು ಕೋರಿದ್ದಾರೆ.

Get real time updates directly on you device, subscribe now.

Comments are closed.

error: Content is protected !!