ಫೆ. 17 ರಿಂದ ಜಿಲ್ಲೆಯಲ್ಲಿ ರಸ್ತೆ ಸಂಚಾರ ಸಮೀಕ್ಷೆ
ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯು 2025 ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಫೆಬ್ರವರಿ 17 ರಿಂದ ಫೆ.24ರ ವರೆಗೆ ರಸ್ತೆ ಸಂಚಾರದ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ಪ್ರತಿ ವರ್ಷಕೂಮ್ಮೆ ಎರಡು ದಿನ ಮತ್ತು ಐದು ವರ್ಷಗಳಿಗೊಮ್ಮೆ ಏಳು ದಿನಗಳ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆಗಳ ಸಂಚಾರ ಸಾಂಧ್ರತೆ, ಸಂಚಾರ ತೀವ್ರತೆ ಕಂಡು ಹಿಡಿಯುವುದಕ್ಕೆ ರಸ್ತೆಗಳ ಅಗಲಳತೆ ನಿರ್ದರಿಸಲು ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ.
ಪ್ರಸ್ತುತ ವರ್ಷದಲ್ಲಿ ಫೆ. 17ರ ಬೆಳಿಗ್ಗೆ 6 ರಿಂದ ಫೆ. 24ರ ಬೆಳಿಗ್ಗೆ 6 ಗಂಟೆಯವರೆಗೆ ರಸ್ತೆ ಸಂಚಾರ ಸಮೀಕ್ಷೆ ಕಾರ್ಯವನ್ನು ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಸ್ಥಾಪಿಸಲಾಗುವ ಸಮೀಕ್ಷೆ ಕೇಂದ್ರಗಳಲ್ಲಿ ಕೈಗೊಳ್ಳಲಾಗುತ್ತದೆ. ರಸ್ತೆ ಸಂಚಾರ ಸಮೀಕ್ಷೆಗಾಗಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಸಮೀಕ್ಷೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.
ರಸ್ತೆಗಳ ಮೇಲೆ ಕೇಮರಾ ಬೇಸಡ್ ಕೇಂದ್ರಗಳನ್ನು ಸ್ಥಾಪಸಿಲಾಗುತ್ತದೆ. “ವಾಹನಗಳ ರಸ್ತೆ ಸಂಚಾರ ಸಮೀಕ್ಷೆ ಕೇಂದ್ರವಿದೆ, ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ” ಎಂದು ಸೂಚನಾ ಫಲಕಗಳನ್ನು ತೂಗುಬಿಡಲಾಗಿರುತ್ತದೆ. ಎಲ್ಲಾ ವಾಹನ ಚಾಲಕರು ತಮ್ಮ ವಾಹನವನ್ನು ನಿಧಾನವಾಗಿ ಸಾಗಿಸಿಕೊಂಡು, ಮುಂದೆ ಸಾಗಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಬಳ್ಳಾರಿ ವೃತ್ತದ ಅಧೀಕ್ಷಕ ಇಂಜಿನೀಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.