ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅಥವಾ ಡಾ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 75% ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು 25 % ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅಲ್ಪಸಂಖ್ಯಾತರ ವರ್ಗದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳ 2ಎ, 3ಎ ಮತ್ತು 3ಬಿ ಅಭ್ಯರ್ಥಿಗಳ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು.
ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಸೇವಾಸಿಂಧು ಪೋರ್ಟಲ್‌ನಲ್ಲಿ ವೆಬ್‌ಸೈಟ್  https://sevasindhuservices.karnataka.gov.in ಅಥವಾ  dom.karnataka.gov.in/koppal/public ನಲ್ಲಿ ನೇರವಾಗಿ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆ, ಮಾಹಿತಿ ಕೇಂದ್ರ ಕಛೇರಿಗಳಲ್ಲಿ ಎಲ್ಲಾ ದಾಖಲೆಗಳೊಂದಿಗೆ ಭೇಟಿ ನೀಡಿ ಕೊನೆಯ ದಿನಾಂಕದೊಳಗಾಗಿ ಉಚಿತವಾಗಿ ಅರ್ಜಿ  ಸಲ್ಲಿಸಬಹುದಾಗಿದೆ.
ಕುಕನೂರು, ತಳಕಲ್, ಕುದರಿಮೋತಿ, ಟಣಕನಕಲ್, ಹಿರೇಬೆಣಕಲ್-1, ಹಿರೇಬೆಣಕಲ್-2, ಹಿರೇಬನ್ನಿಗೋಳ (ಕುಷ್ಟಗಿ), ಹಿಟ್ನಾಳ, ಮುಧೋಳ, ಹುಲಿಹೈದರ್‌ದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಹಿರೇಸಿಂದೋಗಿಯ ಅಲ್ಪಸಂಖ್ಯಾತರ ನವೋದಯ ಮಾದರಿಯ ವಸತಿ ಶಾಲೆ ಹಾಗೂ ಯಲಬುರ್ಗಾ, ಕುಷ್ಟಗಿ ಮತ್ತು ಗಂಗಾವತಿ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅಥವಾ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗಧಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ  ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ ದೂ.ಸಂ: 08539-225070, 8088892549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ ಮೊ.ಸಂ: 9972524670. ಕುಷ್ಟಗಿ ಮೊ.ಸಂ: 8861610578 ಹಾಗೂ ಯಲಬುರ್ಗಾ ಮೊ.ಸಂ: 9620522537ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!