ಹಣ್ಣು, ಜೇನು ಪ್ರದರ್ಶನ ಮತ್ತು ಮಾರಾಟ ಮೇಳ: ಹೆಸರು ನೋಂದಾಯಿ : ಕೃಷ್ಣ ಉಕ್ಕುಂದ
: ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಹಮ್ಮಿಕೊಳ್ಳಲಾಗುವ ಹಣ್ಣು, ಜೇನು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಬೆಳೆಗಾರರು ತಮ್ಮ ಹೆಸರು ನೋಂದಾಯಿಸುವಂತೆ ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ರೈತರಿಂದ ನೇರವಾಗಿ ಗ್ರಾಹಕರಿಗೆ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಕರಬೂಜ, ಅಂಜೂರ, ಪೇರಲ, ಜೇನು ಈ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವ ಮತ್ತು ಕೊಪ್ಪಳ ಜಿಲ್ಲೆಯ ನಾಗರಿಕರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಯೋಗ್ಯ ಬೆಲೆಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರಿಂದ ನೇರವಾಗಿ ಗ್ರಾಹಕರಿಗೆ ಒದಗಿಸುವ ಉದ್ದೇಶದಿಂದ “ಶಿವರಾತ್ರಿ ಹಬ್ಬದ ಪ್ರಯುಕ್ತ” ಫೆಬ್ರವರಿ 23 ಫೆ. 27ರ ವರೆಗೆ 5 ದಿನಗಳ ಕಾಲ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಮೇಳದಲ್ಲಿ ಭಾಗವಹಿಸುವ ಆಸಕ್ತ ಕೊಪ್ಪಳ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಅಂಜೂರು, ಪೇರಲ ಮತ್ತು ಕರಬೂಜ ಬೆಳೆಗಾರರು ಮುಂಗಡವಾಗಿ ಮಾರಾಟ ಮಳಿಗೆಗಳನ್ನು ಕಾಯ್ದಿರಿಸಲು ತಮ್ಮ ಹೆಸರನ್ನು ಇಲಾಖೆಯ ಅಧಿಕಾರಿಗಳ ಹತ್ತಿರ ನೋದಾಯಿಸಬೇಕು.
ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು, ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ಈ ಕೆಳಗೆ ನಮೂದಿಸಿದ ಅಧಿಕಾರಿಗಳಿಗೆ ನೀಡಬೇಕು. ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಈ ಮೂಲಕ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯ ಕೇಂದ್ರ ಸ್ಥಾನಿಕ ಸಹಾಯಕರ ಮೊ.ಸಂ: 9741057047, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಕೊಪ್ಪಳ ಮೊ.ಸಂ: 9448511649, ಗಂಗಾವತಿ ಮೊ.ಸಂ: 8861697989, ಕುಷ್ಟಗಿ ಮೊ.ಸಂ: 9611888607 ಹಾಗೂ ಯಲಬುರ್ಗಾ ಮೊ.ಸಂ: 9945644338 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Comments are closed.