ರಾಷ್ಟ್ರೀಯ ಆರೋಗ್ಯ ಅಭಿಯಾನ: ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ

Get real time updates directly on you device, subscribe now.

:‌ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿನ ಕಾರ್ಯಕ್ರಮಗಳು, ಯೋಜನೆಗಳ ಕುರಿತು, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸಾಂಗ್ ಮತ್ತು ಡ್ರಾಮಾ ಡಿವಿಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾವಣೆಯಾಗಿರುವ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲಾತಂಡದಲ್ಲಿ ಕನಿಷ್ಠ 6 ರಿಂದ 8 ಜನ ಕಲಾವಿದರಿದ್ದು, ಈ ಪೈಕಿ ಇಬ್ಬರು ಮಹಿಳಾ ಕಲಾವಿದರು ಇರುವುದು ಕಡ್ಡಾಯ. ಕಲಾತಂಡದವರು ಕೊಪ್ಪಳ ಜಿಲ್ಲೆಯವರಾಗಿರಬೇಕು. ಸಂಗೀತ ಸಲಕರಣೆಗಳನ್ನು ಹಾಗೂ ಸಮವಸ್ತ್ರ ಹೊಂದಿರಬೇಕು. ಜಿಲ್ಲೆಗೆ ಒಟ್ಟು 4 ಕಲಾ ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.
ಆಸಕ್ತ ಅರ್ಹ ಬೀದಿನಾಟಕ ಕಲಾತಂಡಗಳು ತಮ್ಮ ತಂಡದ ಸಂಪೂರ್ಣ ವಿವರ, ಕಲಾವಿದರ ವಿವರ, ಅನುಭವ ದಾಖಲೆಗಳ ಸಹಿತ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಕೊಪ್ಪಳ. ಇವರಿಗೆ ಫೆಬ್ರವರಿ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಕಲಾ ತಂಡಗಳಿಗೆ ಫೆ. 24 ರಂದು ಬೆಳಗ್ಗೆ 10.30ಕ್ಕೆ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದ್ದು, ಅರ್ಜಿ ಸಲ್ಲಿಸಿದ ಕಲಾತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ 4 ತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಆಸಕ್ತ ಬೀದಿನಾಟಕ ಕಲಾತಂಡಗಳು ಕಛೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಟಿ.ಲಿಂಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!