ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಯ ವಸತಿ ಗೃಹಗಳ ಕಟ್ಟಡದ ಉದ್ಘಾಟನೆ

Get real time updates directly on you device, subscribe now.

Kannadanet Breaking NEws
ಕೊಪ್ಪಳ ): ಜಿಲ್ಲಾಡಳಿತ ಭವನದ ಆವರಣದ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಸತಿ ಗೃಹಗಳ ಕಟ್ಟಡ ಉದ್ಘಾಟನಾ ಸಮಾರಂಭವು ಆಗಸ್ಟ್ 15 ರಂದು ನಡೆಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ನೂತನ ಕಟ್ಟಡದ ಅಂಗಳಕ್ಕೆ ಆಗಮಿಸಿ ಮೊದಲಿಗೆ ಸಸಿ ನೆಟ್ಟರು.
ಬಳಿಕ ವಸತಿ ಗೃಹಗಳ ಕಟ್ಟಡದ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ, ಜಿಪಂ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಶಶಿಧರ, ವ್ಯವಸ್ಥಾಪಕರಾದ ಮಂಜುನಾಥ, ಅಭಿಯಂತರರಾದ ಆನಂದ ಬಳ್ಳಾರಿ, ವಿಕಾಸ ಕೋಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: