ಪತ್ರಕರ್ತರಿಗೆ ಉಚಿತ ಹೆಲ್ತ್ ಸ್ಕೀಂ ಜಾರಿಗೊಳಿಸಿ ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಮನವಿ

Get real time updates directly on you device, subscribe now.

ಬೆಂಗಳೂರು:
ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ೋಷಿಸಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು, ಆಸ್ಪತ್ರೆಗಳಿಗೆ ದಾಖಲಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಅವರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿವೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯೋಜನೆಯೊಂದನ್ನು ಜಾರಿಗೆ ತರಬೇಕು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ
ವಿನಂತಿಸಿದ್ದಾರೆ.
ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಹಕ್ಕೋತ್ತಯಕ್ಕೆ ಸ್ಪಂಧಿಸಿದ ಸಿಎಂ, ಬಜೆಟ್‌ನಲ್ಲಿ ಪತ್ರಕರ್ತರಿಗಾಗಿ ಪ್ರತ್ಯೇಕ ಹೆಲ್ತ್ ಸ್ಕೀಂ ಜಾರಿಗೆ ನೀಡುವುದಾಗಿ ಭರವಸೆ ನೀಡಿದ್ದನ್ನು ಪತ್ರದಲ್ಲಿ ಅವರು ನೆನಪಿಸಿದ್ದಾರೆ.
ಸರ್ಕಾರಿ ನೌಕರರಿಗೆ ನೀಡಿರುವ ಸಂಜೀವಿನಿ ಆರೋಗ್ಯ ಯೋಜನೆ ಮಾದರಿಯಲ್ಲಿಯೇ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಆರೋಗ್ಯ ಯೋಜನೆ ಜಾರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಭಾಕರ್ ಅವರಿಗೂ ಮನವಿ:
ಪತ್ರಕರ್ತರ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಭೇಟಿ ಮಾಡಿದ ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿದೆ.
ಪತ್ರಕರ್ತರಿಗೆ ಆರೋಗ್ಯ ಯೋಜನೆ ಜಾರಿಗೊಳಿಸುವ ವಿಷಯ ಮುಖ್ಯಮಂತ್ರಿಗಳ ಗಮನದಲ್ಲಿದ್ದು ಈ ಬಗ್ಗೆ ಸಿಹಿ ಸುದ್ದಿ ಪತ್ರಕರ್ತರ ಸಮುದಾಯಕ್ಕೆ ಲಭ್ಯವಾಗಲಿದೆ ಎನ್ನುವ ಭರವಸೆಯನ್ನು ಕೆ.ವಿ.ಪ್ರಭಾಕರ್ ಅವರು ವ್ಯಕ್ತಪಡಿಸಿದ್ದಾರೆ.
ಹಿಂದುಳಿದ ವರ್ಗ, ಎಸ್ಸಿ ಎಸ್ಟಿ ಹಾಗೂ ಬ್ರಾಹ್ಮಣ ಪತ್ರಿಕೆಗಳ ಜಾಹೀರಾತು ಬಾಬ್ತು 108 ಕೋಟಿ ರೂ ಬಾಕಿ ಇದ್ದು, ಅದನ್ನು ಬಿಡುಗಡೆ ಮಾಡಿಸಲು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಕೆಯುಡಬ್ಲೂೃಜೆ ಮನವಿ ಮಾಡಿದೆ.
ನಿಯೋಗದಲ್ಲಿ ಕೆಯುಡಬ್ಲೂಜೆ ರಾಜ್ಯ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ರಾಜ್ಯ ಸಮಿತಿ ಸದಸ್ಯ ಚೆಲುವರಾಜು ಮತ್ತಿತರರು ಹಾಜರಿದ್ದರು

Get real time updates directly on you device, subscribe now.

Comments are closed.

error: Content is protected !!