ಜಿಲ್ಲಾಡಳಿತದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ
ಕೊಪ್ಪಳ : ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ವೀರಾವೇಶದಿಂದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಯಂತಿ ಕಾರ್ಯಕ್ರಮ ಕೊಪ್ಪಳ ಜಿಲ್ಲಾಡಳಿತದಿಂದ ಆಗಸ್ಟ್ 15ರಂದು ನಡೆಯಿತು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಜಿ.ಪಂ ಉಪಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ
ಅವರು ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಸಮಾರಂಭದಲ್ಲಿ ಜಂಟಿ ಕೃಷಿ ನಿರ್ದೇಶರಾದ ರುದ್ರೇಶಪ್ಪ ಟಿ.ಎಸ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ, ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಹರೀಶ್ ಜೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Comments are closed.