ಸರಕಾರಿ ನೌಕರರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Get real time updates directly on you device, subscribe now.


ನಾಲ್ಕುದಿಕ್ಕು ಸುದ್ದಿ
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಡೆದಿರುವ ಸರಕಾರಿ ನೌಕರರ ಮೇಲಿನ ಹಲ್ಲೆ ಖಂಡಿಸಿ ಇಂದು ರಾಜ್ಯ ಸರಕಾರಿ ನೌಕರರ ಸಂಘ ಕೊಪ್ಪಳ ಘಟಕದವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯತಿಯ ಪಿಡಿಓ ರತ್ನಮ್ಮ ಗುಂಡಣ್ಣನವರ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನೌಕರರಾದ ಸಚಿನ್ ಹಾಗೂ ನಾಗರಾಜ್ ರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಈ ಎರಡೂ ಘಟನೆಗಳಿಗೆ ಕಾರಣಿಕರ್ತರಾಗಿರುವ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಹಲ್ಲೆಗೊಳಗಾದ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
ಪಿಡಿಓ ಲ್ಲೆ ಮಾಡಿದ ಗ್ರಾಮ ಪಂಚಾಯತಿ ಸದಸ್ಯೆ ಶಾಂತಮ್ಮ ಬಂಡಿವಡ್ಡರ್ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದೂ ಆಗ್ರಹಿಸಿದರು. ಕರ್ನಾಟಕ ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆಯಾದ ಸಂದರ್ಭದಲ್ಲಿ ಕಠಿಣ ಕಾನೂನು ರೂಪಿಸಿದ ಮಾದರಿಯಲ್ಲಿಯೇ ಎಲ್ಲಾ ನೌಕರರಿಗೆ ಅನ್ವಯಿಸುವಂತೆ ಕಠಿಣ ಕಾನೂನು ರೂಪಿಸಿ ನೌಕರರು ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಹಿರಿಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷರಾಧ ನಾಗರಾಜ್ ಜುಮ್ಮಣ್ಣವರ, ರಾಜ್ಯ ಪ. ಸದಸ್ಯರಾದ ಮಹಮದ್ ಅಸೀಪ್ ಅಲಿ, ಜಿಲ್ಲಾ ಖಜಾಂಚಿ ಜಯತೀರ್ಥ ದೇಸಾಯಿ, ಜಿಲ್ಲಾ ಕಾರ್ಯದರ್ಶಿ ಶಿವಪ್ಪ ಜೋಗಿ, ಎನ್ ಮಂಜುನಾಥ್, ನಾಗರಾಜ್ ಕುಷ್ಟಗಿ, ಪಿ.ಎಸ್. ಅಮರದೀಪ್ ಸೇರಿದಂತೆ ಇತರರು ಉಪಸ್ತಿತರಿದ್ದರು.

Get real time updates directly on you device, subscribe now.

Comments are closed.

error: Content is protected !!