ಕಾರ್ಖಾನೆ ನಿರ್ಮಾಣಕ್ಕೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಕೊಪ್ಪಳ ನಗರದ ಬಳಿ ನಿರ್ಮಾಣವಾಗುತ್ತಿರುವ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಕಂಪನಿಯ ಉಕ್ಕು ಕಾರ್ಖಾನೆ ಸ್ಥಾಪನೆಯ ಎಲ್ಲ ಸಿದ್ಧತೆಗಳನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರು ಸಚಿವರು ಮತ್ತು ಮುಖಂಡರನ್ನು ಒಳಗೊಂಡ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊಪ್ಪಳದಲ್ಲಿ ಬಲ್ದೊಟಾ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ನ ಕಾರ್ಖಾನೆ ವಿಸ್ತರಣೆಗೆ ಅವಕಾಶ ನೀಡದಂತೆ ಮನವಿ ಸಲ್ಲಿಸಲಾಯಿತು.
ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಥಳದಲ್ಲೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದು, ಹೊಸ ಕಾರ್ಖಾನೆ ಸ್ಥಾಪನೆಯ ಸಿದ್ಧತೆಯನ್ನು ತಕ್ಷಣ ನಿಲ್ಲಿಸಿ, ತಮಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಸರ್ಕಾರದ ವತಿಯಿಂದ ಕೈಗಾರಿಕೆ ಸ್ಥಾಪನೆಯ ತಡೆಯುವ ಕುರಿತಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿಯೂ ಸರ್ವ ಪಕ್ಷಗಳ ನಿಯೋಗಕ್ಕೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರೊಂದಿಗೆ ಸಭೆ ನಡೆಸುವೆ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯರ ಭೇಟಿ:
ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಮುನ್ನ ಶಿವರಾಜ ತಂಗಡಗಿಯವರ ಗೃಹ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ಸರ್ವಪಕ್ಷಗಳ ಚುನಾಹಿತ ಪ್ರತಿನಿಧಿಗಳ, ರಾಜಕೀಯ ಮುಖಂಡರು ಸಭೆ ನಡೆಸಿದ್ದು, ಬಳಿಕ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಬಿ.ಎಸ್.ಪಿ.ಎಲ್. ಉಕ್ಕು ಕಾರ್ಖಾನೆ ಸ್ಥಾಪನೆಯಿಂದ ಜನರ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದರು. ಎಲ್ಲರೂ ಕೂಡಾ ಉಕ್ಕು ಕಾರ್ಖಾನೆ ಸ್ಥಾಪನೆ ಮಾಡದಂತೆ ಸರ್ವಪಕ್ಷಗಳ ನಿಯೋಗದಲ್ಲಿನ ಎಲ್ಲರೂ ಮನವೊಲಿಸುವ ಪ್ರಯತ್ನ ಮಾಡಿದರು. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಗೂ ಸರ್ವಪಕ್ಷಗಳ ನಿಯೋಗದಿಂದ ಉಕ್ಕು ಕಾರ್ಖಾನೆ ಸ್ಥಾಪಿಸದಂತೆ ಮನವಿ ಸಲ್ಲಿಸಿದರು.
ಈ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ ಭಾರಿ ಜನಾಕ್ರೋಶ ವ್ಯಕ್ತವಾಗಿತ್ತು, ಕಳೆದ ತಿಂಗಳು ಕೊಪ್ಪಳ ಬಂದ್ ಕೂಡ ಮಾಡಲಾಗಿತ್ತು.ಸದ್ಯ ಮುಖ್ಯಮಂತ್ರಿಗಳ ಈ ಸೂಚನೆಯಿಮದ ಜನರಲ್ಲಿ ಕಾರ್ಖಾನೆ ನಿರ್ಮಾಣ ವಾಗುವುದಿಲ್ಲ ಎಂಬ ಆಸೆ ಚಿಗುರಿದೆ.
ನಿಯೋಗದಲ್ಲಿ ಸಂಸದ ಕೆ. ರಾಜಶೇಖರ ಹಿಟ್ನಾಳ, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ , ವಿಧಾನ ಪರಿಷತ್ ವಿರೋಧ ಪಕ್ಷದ ಸಚೇತಕ ದೊಡ್ಡನಗೌಡ ಪಾಟೀಲ್ , ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಗಂಗಾವತಿ ಶಾಸಕ ಜನಾರ್ದನ್ ರೆಡ್ಡಿ, ಯಲಬುರ್ಗಾ ಶಾಸಕ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ್, ಲೋಕಸಭಾ ಸದಸ್ಯ ರಾಜಶೇಖರ್ ಹಿಟ್ನಾಳ್ ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ , ಮಾಜಿ ಸಂಸದ ಕರಡಿ ಸಂಗಣ್ಣ, ಶಿವರಾಮೇಗೌಡ, ಡಿಸಿಸಿ ಅಧ್ಯಕ್ಷ ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಕರಿಯಣ್ಣ ಸಂಗಟಿ , ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ್, ಬಿಜೆಪಿ ಮುಖಂಡ ಡಾ. ಬಸವರಾಜ್ ಕ್ಯವತರ್, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ್, ವೀರೇಶ್ ಮಾಹಂತಯ್ಯನಮಠ, ಮಾಜಿ ಶಾಸಕ ಕೆ ಶರಣಪ್ಪ , ಶರಣಪ್ಪ ಸಜ್ಜನ್, ಸಂತೋಷ್ ದೇಶಪಾಂಡೆ , ಹನುಮಂತ್ ಜಲವರ್ದಿನಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪ್ರಸನ್ನ ಗಡಾದ್, ಗ್ಯಾರೆಂಟಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರುವಿವಿಧ ಪಕ್ಷಗಳ ನಾಯಕರು, ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.
Comments are closed.