BSPL ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸ್ಥಗಿತ: ಜಿಲ್ಲಾಡಳಿತ ಸ್ಪಷ್ಟನೆ
ಕೊಪ್ಪಳ: BSPL ಕಾರ್ಖಾನೆಯಲ್ಲಿ ನಡೆಯು ತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಪಾರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವ ಶಿವರಾಜ್ ತಂಗಡಗಿ ನೇತೃತ್ವದ ಸರ್ವಪಕ್ಷದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಈ ಕಾರ್ಖಾನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೊಸ ಕಾರ್ಖಾನೆ ಸ್ಥಾಪನೆಯ ಸಿದ್ಧತೆಯನ್ನು ತಕ್ಷಣ ನಿಲ್ಲಿಸಿ, ತಮಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ BSPL ಕಾರ್ಖಾನೆಯ ಕಾಮಗಾ ರಿಗಳು ನಡೆಯುತ್ತಿದ್ದವು ಇದರ ಬಗ್ಗೆಮಾದ್ಯಮಗಳಲ್ಲಿ ಪ್ರಸಾರ ಮಾಡಲಾಗಿತ್ತು
ಇದಕ್ಕೆಇದಕ್ಕೆ ಜಿಲ್ಲಾಡಳಿತ ಸ್ಪಷ್ಟೀಕರಣ ನೀಡಿ ಸದ್ಯ ಕಾರ್ಖಾನೆ ಯಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿಲ್ಲ ಎಂದು ಅಪಾರ ಜಿಲ್ಲಾಧಿಕಾ ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.