ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಇನೊಬ್ಬ ಆರೋಪಿಯ ಸೆರೆ
ಕೊಪ್ಪಳ, ಮಾರ್ಚ್:೦೮: ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಲೆಯರ ಮೇಲೆ ಅತ್ಯಾಚಾರ ನಡೆಸಿ ಒಬ್ಬನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇನೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಮೂರನೇ ಆರೋಪಿ ಯಾದ ಸಾಯಿರಾಂ ಎಂದು ತಿಳಿದು ಬಂದಿದ್ದು, ಈತನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.
ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಲಾದ ಮಲ್ಲೇಶ್(೨೨) ಮತ್ತು ಚೇತನ್ ಸಾಯಿ ಸಿಳ್ಳೇಕ್ಯಾತರ್(೨೧) ಎಂಬ ಇಬ್ಬರು ಅರೋಪಿಗಳನ್ನು ನಿನ್ನೆ ಬಂಧಿಸಲಾಗಿತ್ತು,ಆದರೆ ಮೂರನೇ ಆರೋಪಿಯ ಸೆರೆ ಆಗಿರಲಿಲ್ಲ ಇಂದು ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣವು ಇಡಿ ದೇಶವನ್ನು ಬೆಚ್ಚಿ ಬೀಳಿಸುವ ಪ್ರಕರಣ ಇದಾಗಿತ್ತು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಪೊಲೀಸರಿಗೆ ಸೂಚಿಸಿದ್ದರು