ಬಸ್ ಪಲ್ಟಿ : ಶಾಲಾ ಮಕ್ಕಳು ಸೇರಿ ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಗಾಯ : ಸಂಸದ ರಾಜಶೇಖರ ಹಿಟ್ನಾಳ ಆಸ್ಪತ್ರೆಗೆ ಭೇಟಿ
ಕೊಪ್ಪಳ : ಕಪ್ಪಳ ತಾಲೂಕಿನ ಹಟ್ಟಿ- ಹೈದರ್ ನಗರದಿಂದ ಹೊರಟಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿಯಾಗಿ ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಕೊಪ್ಪಳ ತಾಲೂಕಿನ ಹೈದರ್ ನಗರ- ಹಟ್ಟಿ ರಸ್ತೆಯಲ್ಲಿ ಘಟನೆ ನಡೆದಿದ್ದು ಕೇಸಲಾಪುರದಿಂದ ಹೈದರನಗರ, ಹಟ್ಟಿ ಮಾರ್ಗವಾಗಿ ಅಳವಂಡಿಗೆ ತೆರಳುವ ಬಸ್ ನಲ್ಲಿ ಸುಮಾರು ೭೦ ಕ್ಕೂ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಇದ್ದರು. ಬಸ್ ಪಲ್ಟಿಯಾದ ವಿಷಯನ್ನು ತಕ್ಷಣವೇ ವಿದ್ಯಾರ್ಥಿಗಳು ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ಪಾಲಕರು ಹಾಗೂ ಗ್ರಾಮಸ್ಥರು ಬಂದು ಪಲ್ಟಿಯಾದ ಬಸ್ ನಲ್ಲಿ ಇದ್ದ ವಿದ್ಯಾರ್ಥಿಗಳು ಹೊರ ತೆಗೆದಿದ್ದಾರೆ. ಬಸ್ ನಲ್ಲಿದ್ದ ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆ ಗೆ ಸಂಸದ ರಾಜಶೇಖರ್ ಹಿಟ್ನಾಳ್ ಬೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರೈಸಿದರು. ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಸೂಚಿಸಿದರು.ಅದೃಷ್ಟವಶಾತ್ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ.
ಮುಂಡರಗಿ ಆಸ್ಪತ್ರೆಗೆ ದಾಖಲಾಗಿದ್ದ ೬ ಮಕ್ಕಳನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ೨೦ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಕೊಪ್ಪಳ ಡಿಡಿಪಿಐ ಶ್ರೀಶೈಲ್ ಬಿರಾದರ್, ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಜಾಕಿರ್ ಹುಸೇನ್. ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಹರ್ತಿ. ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶರಣಬಸವನಗೌಡ. ಸರಕಾರಿ ನೌಕರರ ಸಂಘದ ಸದಸ್ಯರಾದ ಎಸ್’ಬಿ ಕುರಿ. ಹಿರಿಯ ಶಸ್ತ್ರಚಿಕಿತ್ಸಕರಾದ ಕೃಷ್ಣ ಓಂಕಾರ್, ಕಿಮ್ಸ್ ಸದಸ್ಯರಾದ ಸಲೀಂ ಅಳವಂಡಿ ಸೇರಿದಂತೆ ವಿದ್ಯಾರ್ಥಿಗಳ ಪಾಲಕರು, ಹಾಗೂ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.