ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳಿಗೆ, ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳ ಬೇಕಿರುವ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಇವರೆಲ್ಲರಿಗೂ ಅಗತ್ಯ ಊಟ, ತಿಂಡಿಯ ವ್ಯವಸ್ಥೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
Comments are closed.