ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ನೆರವು: ಸಿಎಂ ಸಿದ್ದರಾಮಯ್ಯ, ಪ್ರಭಾಕರ್ ಅವರಿಗೆ ಅಭಿನಂದನೆ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ)ದ ಹೊರನಾಡಿನ ಘಟಕವಾಗಿರುವ ಕಾಸರಗೋಡು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ಕರ್ನಾಟಕ ಸರ್ಕಾರ 25 ಲಕ್ಷ ರೂ ಮಂಜೂರು ಮಾಡಿದೆ.
ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇದಕ್ಕೆ ಸತತ ಪರಿಶ್ರಮ ವಹಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಭಾಗದಲ್ಲಿ ಕನ್ನಡ ಪತ್ರಿಕೆಗಳು ಈಗಲೂ ಹೆಚ್ಚಿನ ಪ್ರಸಾರ ಹೊಂದಿದ್ದು, ಕನ್ನಡ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅವರ ಹಿತ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪತ್ರಕರ್ತರ ಸಂಘಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕಾಸರಗೋಡು ಘಕದ ಮಾಡಿದ ಮನವಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿಗಳು 25 ಲಕ್ಷ ರೂ ಮಂಜೂರು ಮಾಡಿದ್ದಾರೆ.
ಗಡಿ ನಾಡಿನ ಕನ್ನಡ ಪತ್ರಕರ್ತರ ಹಿತ ರಕ್ಷಣೆಗೆ ಬದ್ದವಾಗಿರುವ ಕರ್ನಾಟಕ ಸರ್ಕಾರ, ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇದಕ್ಕೆ ಸತತ ಪರಿಶ್ರಮ ವಹಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾಸರಗೋಡು ಘಟಕದ ಎ.ಆರ್.ಸುಬ್ಬಯ್ಯಕಟ್ಟೆ ಅವರು ಅಭಿನಂದಿಸಿದ್ದಾರೆ. ಆರ್ಥಿಕ ನೆರವು ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೀಡಿದ ಸಹಕಾರವನ್ನು ಅವರು ಸ್ಮರಿಸಿದ್ದಾರೆ