ಕೊಪ್ಪಳ ತಾ.ಪಂಯಲ್ಲಿ 05 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ
ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ 05 ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ .ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಕೊಪ್ಪಳ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಜರುಗಿತು.
ಗೃಹಲಕ್ಷ್ಮೀ ಯೋಜನೆಯ ಕುರಿತು ಸಭೆಯಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಮಾತನಾಡಿ ನವೆಂಬರ್, ಡಿಸೆಂಬರ್-2024ರ ಗೃಹಲಕ್ಷ್ಮೀ ಹಣ ಬಿಡುಗಡೆಯಾಗಿದ್ದು ಶೀಘ್ರದಲ್ಲಿ ಜಮೆಯಾಗಲಿದ್ದು ಜನೇವರಿ, ಫೆಬ್ರುವರಿ-2025ರ ಹಣ ಬಿಡುಗಡೆಯಾಗಿರುವದಿಲ್ಲ ಬಿಡುಗಡೆಯಾದ ತಕ್ಷಣವೇ ಪಾವತಿಗೆ ಕ್ರಮವಹಿಸಲಾಗುವದು ಎಂದು ಮಾಹಿತಿ ನೀಡಿದರು. ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿದಿರುವ ಮಾಹಿತಿಯುಳ್ಳ ನಾಮಫಲಕಗಳನ್ನು ಅಳವಡಿಸಿರುವದಿಲ್ಲವೆಂದು ಸದಸ್ಯರು ಸಭೆಯಲ್ಲಿ ತಿಳಿಸಿದಾಗ ಅಧ್ಯಕ್ಷರು ಕೂಡಲೇ ಅಳವಡಿಸಲು ಕ್ರಮವಹಿಸಬೇಕೆಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ ಬರುವ ದಿನಗಳಲ್ಲಿ
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಜರುಗಲಿದ್ದು ಇಲಾಖೆಯ ಅಧಿಕಾರಿಗಳು ತಮ್ಮ ಫಲಾನುಭವಿಗಳನ್ನು ಗ್ರಾಮವಾರು ಸಮಾವೇಶಕ್ಕೆ ಕರೆತರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
5 ಗ್ಯಾರಂಟಿ ಯೋಜನೆಗಳ ಪ್ರತಿ ಫಲಾನುಭವಿಗೆ ತಲುಪುವಂತೆ ಹಾಜರಿದ್ದ ಎಲ್ಲಾ ಸದಸ್ಯರು, ಅನುಷ್ಠಾನ ಅಧಿಕಾರಿಗಳಿಗೆ ಸಭೆಯ ಅಧ್ಯಕ್ಷರು ಸೂಚಿಸಿದರು.
ಸಭೆಯಲ್ಲಿ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ಸಮಿತಿಯ ಸರ್ವ ಸದಸ್ಯರು, 05 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಹಾಜರಿದ್ದರು.
Comments are closed.