ಭಾಗ್ಯನಗರ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಸಹಾಯವಾಣಿ ಕೇಂದ್ರ ಪ್ರಾರಂಭ

ಭಾಗ್ಯನಗರದ 19 ವಾರ್ಡುಗಳಲ್ಲಿ ಪಟ್ಟಣ ಪಂಚಾಯತಿಯು ಕುಡಿಯುವ ನೀರು ನಿಗದಿತ ಅವಧಿಯಲ್ಲಿ ಪೂರೈಕೆ ಮಾಡಲಾಗುತ್ತಿದೆ. ಮಳೆಯ ಕೊರತೆಯಿಂದ ನದಿ ಪಾತ್ರದಲ್ಲಿನ ನೀರಿನ ಸಂಗ್ರಹ ಕಡಿಮೆಯಾಗಿರುವದರಿಂದ ಮತ್ತು ಬೋರ್‌ವೆಲ್‌ಗಳ ಅಂತರ್ಜಲ ಕಡಿಮೆ ಆಗಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪಟ್ಟಣ ಪಂಚಾಯತಿಯ ಕಛೇರಿಯಲ್ಲಿ ನೂತನವಾಗಿ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿರುತ್ತದೆ.
ಭಾಗ್ಯನಗರ ಪಟ್ಟಣದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಸಾರ್ವಜನಿಕರು ಪ.ಪಂ ಸಹಾಯವಾಣಿ ಸಂಖ್ಯೆ 08539-230243 ಗೆ ಕರೆ ಮಾಡಿ ದೂರನ್ನು ದಾಖಲಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.