ಸರಳ ಸಜ್ಜನಿಕೆಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ

Get real time updates directly on you device, subscribe now.

ದಾವಣಗೆರೆ : ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್.ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ನೀಡಲಿದೆ.

ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ.ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಛೇರ್ಮನ್ ಡಾ.ದಾಕ್ಷಯಿಣಿ ಎಸ್.ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ.

ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತನ್ನ 20 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಿದೆ.

ಈ ಮೂವರು ಗಣ್ಯರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 20 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲು ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹಲೋಥ್ ಅವರು ಒಪ್ಪಿಗೆ ನೀಡಿದ್ದು, ರಾಜ್ಯಪಾಲರ ಅಧೀನ‌ ಕಾರ್ಯದರ್ಶಿ ಬಿ.ಬಿ.ಪ್ರಶಾಂತ್ ಕುಮಾರ್ ಅವರು ಮೈಸೂರಿನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗೆ ದಿನಾಂಕ:13-03-2025 ರಂದು ಪತ್ರ ಬರೆದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಲೋಕೋಪಯೋಗಿ ಸಚಿವರು, ವಾಲ್ಮೀಕಿ ನಾಯಕ ಸಮುದಾಯದ ಮತ್ತು ಅಹಿಂದ ಮುಖಂಡರು, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕರಾದ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರು, ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರು ಹಾಗೂ ದಾವಣಗೆರೆ ಪಬ್ಲಿಕ್ ವಾಯ್ಸ್ ಪತ್ರಿಕೆಯ ಪ್ರಧಾನ ಸಂಪಾದಕರಾದ ಎ.ಸಿ.ತಿಪ್ಪೇಸ್ವಾಮಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!