30 ದಿನಗಳ ಬ್ಯೂಟಿಪಾರ್ಲರ್ ನಿರ್ವಹಣೆ ತರಬೇತಿಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಕೊಪ್ಪಳ ಮಾರ್ಚ್ 25   ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಬ್ಯೂಟಿಪಾರ್ಲರ್ ನಿರ್ವಹಣಾ ತರಬೇತಿಗಳನ್ನ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದ ನಿರುದ್ಯೋಗಿ ಯುವತಿಯರಿಗಾಗಿ ಮೇ 15 ರಿಂದ 30 ದಿನಗಳಕಾಲ ಉಚಿತ ತರಬೇತಿಗಳನ್ನು ನೀಡಲಾಗುತ್ತದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿಯಲ್ಲಿ ಐಬ್ರೂ ಡ್ರೆಂಡಿಂಗ್, ಫೇಶಿಯಲ್, ವ್ಯಾಕ್ಸಿಂಗ್, ಪೆಡಿಕ್ಯೂರ್, ಮೆಹಂದಿ, ಸ್ಯಾರಿಡ್ರೆಪಿಂಗ್, ಕೇಶವಿನ್ಯಾಸ, ಕೇಶವಿನ್ಯಾಸ, ಹೆಚ್‌ಡಿ ಮೇಕಪ್ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಸಾಫ್ಟ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೊಂದಾಯಿಸಲು ತಿಳಿಸಲಾಗಿದೆ. ಅಸಕ್ತರು ನಮ್ಮ ಸಂಸ್ಥೆಯ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಅಥವಾ ಆನ್‌ಲೈನ ಮೂಲಕ (ವೆಬ್‌ಸೈಟ್:  www.rsetihaliyal.org)ಅರ್ಜಿ ಸಲ್ಲಿಸಬಹುದು. https://forms.gle/35fM7G9aga WV6XLC6  ಲಿಂಕ ಬಳಸಿ ಅರ್ಜಿ ಸಲ್ಲಿಸಬಹುದು. ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಥವಾ ದೂರವಾಣಿ ಸಂಖ್ಯೆ: 8970145354, 9483485489, 9482188780 ಮೂಲಕ ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!