ಸರ್ಕಾರಿ ಶಾಲೆಗಳನ್ನು ಉಳಿಸುವ ಸಂಕಲದೊಂದಿಗೆ ಎಐಡಿಎಸ್ಒ ವತಿಯಿಂದ ನಡೆದ ಭಗತ್ ಸಿಂಗ್, ರಾಜ್ ಗುರು, ಸುಖದೇವ್ ಅವರ ಹುತಾತ್ಮ ದಿನಾಚರಣೆ.

Get real time updates directly on you device, subscribe now.

ಶಾಲೆಗಳನ್ನು ಮುಚ್ಚುತ್ತಿರುವ ಇವತ್ತಿನ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ಸಂಕಲ್ಪದೊಂದಿಗೆ ಭಗತ್ ಸಿಂಗ್ ಅವರ ಹುತಾತ್ಮ ದಿನವನ್ನು ಎಐಡಿಎಸ್ಒ ವತಿಯಿಂದ ಭಾನುವಾರ ಆಚರಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣ , ಕುಷ್ಟಗಿ ರಸ್ತೆ ಬಳಿಯ ಮೈದಾನ, ವಿವಿಧ ಕಾಲೇಜು ಮತ್ತು ಹಾಸ್ಟೆಲ್ ಗಳ್ಳಲ್ಲಿ ಸಾರ್ವಜನಿಕರೊಂದಿಗೆ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ಹುತಾತ್ಮ ದಿನವನ್ನು ಆಚರಿಸಿ, ಅವರನ್ನು ಸ್ಮರಿಸಲಾಯಿತು. ಹಾಗೆಯೇ ಭಗತ್ ಸಿಂಗ್ ಕುರಿತಾಡ ಸಿನಿಮಾ ಪ್ರದರ್ಶನವನ್ನು ನಡೆಸಲಾಯಿತು.
ಈ ವೇಳೆ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ, ಭಗತ್ ಸಿಂಗ್ ಅವರು ಕ್ರಾಂತಿ ಮತ್ತು ಸ್ವಾತಂತ್ರ್ಯದ ಬಗೆಗಿನ ತಮ್ಮ ವಿಚಾರವನ್ನು ಎಷ್ಟು ಪ್ರಖರವಾಗಿ ಹರಡಿದ್ದರೆಂದರೆ ಸಾವಿರಾರು ಜನ ಭಗತ್ ಸಿಂಗ್ ಅವರ ವಿಚಾರಗಳನ್ನು ಈಡೇರಿಸಲು ಪ್ರಾಣತ್ಯಾಗಕ್ಕೆ ಸಿದ್ಧರಾಗಿ ಬೀದಿಗಿಳಿದಿದ್ದರು. ಭಗತ್ ಸಿಂಗ್ ಅವರ ಪ್ರಕಾರ ಸ್ವಾತಂತ್ರ್ಯದ ಪರಿಕಲ್ಪನೆ ಹೀಗಿತ್ತು “ಕೇವಲ ಸ್ವಾತಂತ್ರ್ಯ ಪಡೆಯುವುದು ನಮ್ಮ ಉದ್ದೇಶವಲ್ಲ, ಬ್ರಿಟೀಷರಿಂದ ಪಡೆದ ಸ್ವಾತಂತ್ರ್ಯ ನಮ್ಮದೇಶದ ಕೆಲವೇ ಕೆಲವು ಶ್ರೀಮಂತ ವರ್ಗಕ್ಕೆ ವರ್ಗಾವಣೆಯಾದರೆ, ಅದು ನಿಜವಾದ ಸ್ವಾತಂತ್ರ್ಯವಾದೀತೆ? ಹೀಗೆ ಸಿಗುವ ಸ್ವಾತಂತ್ರ್ಯ ನಮ್ಮದೇಶದ ಸಾಮಾನ್ಯ ಜನರ ಬದುಕಿನಲ್ಲಿ ಏನಾದರೂ ಬದಲಾವಣೆಯನ್ನು ತರಲು ಸಾಧ್ಯವೇ? ದೇಶದ ರೈತರ, ಬಡ ಕೂಲಿ-ಕಾರ್ಮಿಕರ ಜೀವನ ಉತ್ತಮವಾಗುವುದೇ? ಸ್ವಾತಂತ್ರ್ಯ ಪಡೆಯುವುದು ಮಾತ್ರವೇ ನಮ್ಮ ಉದ್ದೇಶವಲ್ಲ, ಅದು ಮೊದಲ ಹೆಜ್ಜೆ ನಮ್ಮ ಅಂತಿಮ ಗುರಿ ಉನ್ನತವಾದ ರಾಷ್ಟ್ರವನ್ನು ನಿರ್ಮಾಣ ಮಾಡುವುದು. ಯಾವ ರಾಷ್ಟ್ರತನ್ನೆಲ್ಲ ಜನರಿಗೆ ಸಮಾನವಾಗಿ ಬದುಕುವ ಹಕ್ಕನ್ನು ನೀಡುತ್ತದೆಯೋ, ಯಾವ ರಾಷ್ಟ್ರಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವುದಿಲ್ಲವೋ, ಯಾವ ರಾಷ್ಟ್ರ ಮನುಷ್ಯನಿಂದ ಮನುಷ್ಯನ ಶೋಷಣೆಯನ್ನು ಕೊನೆಗಾಣಿಸುವುದೋ ಆಂತಹ ರಾಷ್ಟ್ರ”.
ಶಿಕ್ಷಣದ ವ್ಯಾಪಾರೀಕರಣ, ನಿರುದ್ಯೋಗ, ಹಸಿವು, ಬಡತನ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಮುಂತಾದ ಸಮಸ್ಯೆ ತಡೆಯಬೇಕು. ಶಿಕ್ಷಣ, ಮಾನವೀಯತೆ, ಸಂಸ್ಕೃತಿ ಉಳಿವಿಗೆ, ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಭಗತ್ ಸಿಂಗ್ ವಿಚಾರಗಳಿಂದ ಸ್ಫೂರ್ತಿ ಪಡೆಯಬೇಕು’ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಎಐಡಿಎಸ್ಒ ಜಿಲ್ಲಾ ಸಂಘಟನಾಕಾರರಾದ ಸದಾಶಿವ,ಪ್ರದೀಪ್,ಬಾಬು, ಶರಣಪ್ಪ, ಪಲ್ಲವಿ, ಸವಿತಾ,ಕವಿತಾ, ರಾಮಣ್ಣ, ದೊಡ್ಡಬಸವ ಬಸವರಾಜಪ್ಪ ಮುಂತಾದವರು ಇದ್ದರು.

Get real time updates directly on you device, subscribe now.

Comments are closed.

error: Content is protected !!