ರಾಷ್ಟ್ರೀಯ ವಿದ್ಯಾರ್ಥಿವೇತನ: ಬಯೋಮೆಟ್ರಿಕ್ ದೃಢೀಕರಣ ಮಾಡಿಸಲು ಸೂಚನೆ
: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿವೇತನದಡಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವಂತೆ ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಸಂಬಂಧಪಟ್ಟಂತೆ, ಕರ್ನಾಟಕದಾದ್ಯಂತ ನಕಲಿ ಸಂಸ್ಥೆಗಳು ಪತ್ತೆಯಾಗಿರುವುದರಿಂದ 2022-23ನೇ ಸಾಲಿನ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಮೊತ್ತವು ವಿತರಿಸುವುದಕ್ಕೆ ವಿಳಂಬವಾಗಿರುತ್ತದೆ. ಆದ್ದರಿಂದ ಈ ಸಾಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ಆದಷ್ಟು ಬೇಗ ಪಾವತಿಸಬೇಕಾಗಿದ್ದು, 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸಿಕೊಳ್ಳುವುದು ಅವಶ್ಯಕವಾಗಿರುತ್ತದೆ.
ಈಗಾಗಲೇ ಸಂಸ್ಥೆಯ ಮುಖ್ಯಸ್ಥರು, ಸಂಸ್ಥೆಯ ನೋಡಲ್ ಅಧಿಕಾರಿಗಳು ಬಯೋಮೆಟ್ರಿಕ್ ದೃಢೀಕರಣ ಮಾಡಿಸಿದ್ದು, 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು ಕೂಡ ಆಗಸ್ಟ್ 20ರೊಳಗೆ ಹತ್ತಿರದ ತಾಲೂಕು ಬಯೋಮೆಟ್ರಿಕ್ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸಿಕೊಳ್ಳುವುದು ಅತಿ ಅವಶ್ಯಕವಾಗಿರುತ್ತದೆ. ಇಲ್ಲವಾದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ವಂಚಿತರಾಗುತ್ತಾರೆ ಎಂದು ಈ ಮೂಲಕ ತಿಳಿಸಿದೆ.
ವಿದ್ಯಾರ್ಥಿಗಳು ಬಯೋಮೆಟ್ರಿಕ್ ದೃಢೀಕರಣ ಮಾಡಿಸಿಕೊಳ್ಳುವುದು ಆಗಸ್ಟ್ 20 ಕೊನೆಯ ದಿನವಾಗಿದೆ. ಸಂಸ್ಥೆಯ ನೋಡಲ್ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸುವ ಆಗಸ್ಟ್ 23 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ
Comments are closed.