ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ
ಕೊಪ್ಪಳ : ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ ಇದೀಗ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದಾರೆ. ನಿರ್ಗಮಿತ ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
2014ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ನಲಿನ್ ಅತುಲ್ ಅವರು ಮೂಲತಃ ಬಿಹಾರ ರಾಜ್ಯದವರಾಗಿದ್ದಾರೆ. ಈ ಮೊದಲು ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಸೇವೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ಮತ್ತಿತರರಿದ್ದರು.
ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಬೆಂಗಳೂರಿನ ಕರ್ನಾಟಕ ಸ್ಟೇಟ್ ರೋಡ ಟ್ರಾನ್ಸಪೋರ್ಟ್ ಕಾರ್ಪೊರೇಷನ್ ನ ನಿರ್ದೇಶಕರಾಗಿ ವರ್ಗಾವಣೆ ಗೊಂಡಿದ್ದಾರೆ.
Comments are closed.