ಅನಾವಶ್ಯಕವಾಗಿ ನೀರು ವ್ಯಯ ಆಗದಂತೆ ನೋಡಿಕೊಳ್ಳಬೇಕು- ಎಂ. ಸುಂದರೇಶ ಬಾಬು
ಕೊಪ್ಪಳ. ಏಪ್ರಿಲ್ :- ತುಂಗಭದ್ರಾ ಎಡದಂಡೆ ಕಾಲುವೆ ನೀರು ಯಾವುದೇ ರೀತಿಯಲ್ಲಿ ಅನಾವಶ್ಯಕವಾಗಿ ವ್ಯಯ ಆಗದಂತೆ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಕಲಬುರಗಿ ವಿಭಾಗದ ಪ್ರಭಾರಿ ಪ್ರಾದೇಶಿಕ ಆಯುಕ್ತರಾದ ಎಂ. ಸುಂದರೇಶ ಬಾಬು ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಟಿಎಲಬಿಸಿ ನೀರು ನಿರ್ವಹಣೆ ಕುರಿತು ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು. ತುಂಗಭದ್ರಾ ಎಡದಂಡೆ ನೀರು ನಿರ್ವಹಣೆ ಎಸ್ಇ. ಇಇ ಸಂಬಂದಪಟ್ಟ ತಾಲ್ಲೂಕಿನ ತಹಶಿಲ್ದಾರರು ಸೇರಿದಂತೆ ಇತರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಜೂಮ್ ವಿಡಿಯೋ ಕಾನ್ಪರೇನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದರು.
ಸಭೆಯಲ್ಲಿ ಈಗಾಗಲೇ ನಿರ್ಧರಿಸಿದಂತೆ 3 ಸಾವಿರ ಕ್ಯೂಸೆಕ್ಸ್ ನೀರನ್ನು ಪ್ರತಿದಿನ ಬಿಡಬೇಕು. ಸಂಬಂಧಿಸಿದ ಡಿಸ್ಟ್ರಿಬ್ಯೂಟಗಳಲ್ಲಿ ಈಗಾಗಲೇ ಆದೇಶಿಸಿದಂತೆ ಗೇಜಗಳ ನಿಯಂತ್ರಣ ಮಾಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ರೀತಿಯಲ್ಲಿ ನೀರು ಅನಾವಶ್ಯಕವಾಗಿ ವ್ಯಯ ಆಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಜೂಮ್ ವಿಡಿಯೋ ಕಾನ್ಪರೇನ್ಸ ಸಭೆಯಲ್ಲಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು. ಅಪರ ಜಿಲ್ಲಾಧಿಕಾರಿಗಳು. ಸಹಾಯಕ ಆಯುಕ್ತರು. ತುಂಗಭದ್ರಾ ಎಡದಂಡೆ ನಿರ್ವಹಣೆ ಎಸ್.ಇ ಹಾಗೂ ಇಇ ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರರು. ಟಾಸ್ಕಪೋರ್ಸ್ ಸಮಿತಿಯವರು ಸೇರಿದಂತೆ ಇತರೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.