ಬೆಂಗಳೂರು:
ಹಿರಿಯ ಪತ್ರಕರ್ತ ಶ್ರೀನಿವಾಸ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ಸೇರಿದ್ದು ಅವರಿಗೆ ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಉದಯ ಟಿವಿ, ಜೀ ಕನ್ನಡ ಸೇರಿದಂತೆ ಹಲವು ಮಾಧ್ಯಮದಲ್ಲಿ ಕ್ರೀಯಾಶೀಲವಾಗಿ ಕೆಲಸ ಮಾಡಿಕೊಂಡಿದ್ದ
ಶ್ರೀನಿವಾಸ್ ಅವರಿಗೆ ಅನಾರೋಗ್ಯದಿಂದ ನಡೆಯಲು ಕಷ್ಟವಾದ ಪರಿಸ್ಥಿತಿ ಎದುರಾಗಿದೆ.
ಸಂಕಷ್ಟದಲ್ಲಿರುವ ಬಗ್ಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ತಂದಿದ್ದ
ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.
ಕೆಯುಡಬ್ಲೂಜೆ ಸಲ್ಲಿಸಿದ ಕೋರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪರಿಹಾರ ಮಂಜೂರು ಮಾಡಿದ್ದಾರೆ. ಸಮಸ್ಯೆಗೆ ಸ್ಪಂದಿಸಿ ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕೃತಜ್ಞತೆ ಸಲ್ಲಿಸಿದೆ.