ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆವಹಿಸಿ – ಸಚಿವ ಶಿವರಾಜ ಎಸ್. ತಂಗಡಗಿ

0

Get real time updates directly on you device, subscribe now.

ಕೊಪ್ಪಳ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕು. ಸಮಸ್ಯೆ ಬಂದರೆ ತಕ್ಷಣ ಅವುಗಳಿಗೆ ಸ್ಪಂದನೆ ಮಾಡಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
 ಅವರು ಶನಿವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯ ಪಂಚಾಯತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬಂದರೆ ಅಂತಹ ಗ್ರಾಮಗಳಿಗೆ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬರಬಹುದು ಅದಕ್ಕೆ ಮುಂಚಿತವಾಗಿ ಏನು ಮಾಡಬೇಕೆಂದು ಅಧಿಕಾರಿಗಳು ಯೋಜನೆ ರೂಪಿಸಿಕೊಳ್ಳಬೇಕು ಎಂದರು.
ಜನರು ಕರೆ ಮಾಡಿದಾಗ ಅವರ ಕರೆಗಳನ್ನು ಸ್ವೀಕರಿಸುವದರ ಜೊತೆಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಕುಷ್ಟಗಿ. ಕಾರಟಗಿ. ಕನಕಗಿರಿ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಜನರಿಗೆ ಕುಡಿಯುವ ನೀರು ಕೊಡಲು ಪರ್ಮನೆಂಟ್ ಸಲುಷನ್ ಹುಡುಕುವ ಕೆಲಸ ಅಧಿಕಾರಿಗಳು ಮಾಡಬೇಕು. ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಂಡು ಬರುತ್ತದೆ. ಗ್ರಾಮಗಳು ಮಾತ್ರವಲ್ಲದೆ ನಗರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವಲ್ಲಿ ಅಧಿಕಾರಿಗಳು ಸಭೆ ಮಾಡಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಹೇಳಿದರು.
ಕುಡಿಯುವ ನೀರಿಗೆ ಯಾವುದೇ ಹಣದ ಕೊರತೆ ಇಲ್ಲ ಅವಶ್ಯಕತೆ ಇರುವಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಾಗುವುದು. ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೆ ವಿಳಂಭ ಮಾಡಬಾರದು. ಜಿಲ್ಲೆಯ ಆಯಾ ತಾಲೂಕಿನ ತಹಶಿಲ್ದಾರರು. ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ನೀರಿನ ಸಮಸ್ಯಗಳಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಿದರು.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಬರುವ 15 ರಿಂದ 20 ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯವರು ಹೇಳುತ್ತಿದ್ದಾರೆ. ಅಕಾಲಿಕ ಮಳೆಯಾಗಿ ಭತ್ತ ಹಾನಿಯಾದರೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ತಾಲೂಕಿನ ತಹಶಿಲ್ದಾರರು ತಕ್ಷಣ ಹಾನಿಯ ವರದಿಯನ್ನು ತೈಯಾರಿಸಿ ರೈತರಿಗೆ ಪರಿಹಾರ ನೀಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಈ ಸಭೆಯಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ.ಎಸ್., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
****

Get real time updates directly on you device, subscribe now.

Leave A Reply

Your email address will not be published.

error: Content is protected !!