ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಆಹ್ವಾನ
: 2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳಿಗೆ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಅಧಿಕಾರಿ, ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ” ನೀಡುವ ಯೋಜನೆಯನ್ನು 2012 ರಿಂದ ಜಾರಿಗೆ ತರಲಾಗಿದೆ. ಪ್ರಸ್ತುತ 2024 ಮತ್ತು 2025ನೇ ಸಾಲಿನಲ್ಲಿ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ತಮ್ಮ ನಾಮ ನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
“ಸರ್ವೋತ್ತಮ ಸೇವಾ ಪ್ರಶಸ್ತಿಯ” ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಯಸುವವರು ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮ ನಿರ್ದೇಶನವನ್ನು ವೆಬ್‌ಸೈಟ್ https://dparar.karnataka.gov.in/ ಅಥವಾ https://sarvothamaawards.karnataka.gov.in/ ರ ಮೂಲಕ ಏಪ್ರಿಲ್ 28 ರೊಳಗಾಗಿ ಸಲ್ಲಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.