ಬನವಾಸಿಯಲ್ಲಿ ಕದಂಬೋತ್ಸವ
ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ 2024-25 ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಬಿ. ಎ. ವಿವೇಕ ರೈ ಅವರಿಗೆ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರೂ ಆದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿ ಅಧ್ಯಕ್ಷ ಸತೀಶ್ ಸೈಲ್, ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ , ಉತ್ತರ ಕನ್ನಡ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಕೆ.,ಕಾರ್ಯದರ್ಶಿ ಡಾ. ವೆಂಕಟೇಶ್ ಎಂ.ವಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ ಎಂ ಗಾಯಿತ್ರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ, ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾದ ಕಾವ್ಯಾರಾಣಿ ಕೆ ವಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.