ಸ್ನಾತಕೋತ್ತರ ಕೇಂದ್ರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ಆಚರಣೆ
ಕೊಪ್ಪಳ (ಏ.14):ಭಾರತದ ಕಾನೂನು ಮತ್ತು ಸಾಮಾಜಿಕ ಚೌಕಟ್ಟನ್ನು ರೂಪಿಸುವಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳು ಜನರಿಗೆ ಸ್ಫೂರ್ತಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ ಹೇಳಿದರು.
ಯಲಬುರ್ಗಾ ಪಟ್ಟಣದ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ಆಚರಣೆಯಲ್ಲಿ ಮಾತನಾಡಿದರು.
ಬಿ.ಆರ್. ಅಂಬೇಡ್ಕರ್ ಬಹುಮುಖ ಪ್ರತಿಭೆಯ ವ್ಯಕ್ತಿಯಾಗಿದ್ದರು. ಅವರು ರಾಜಕಾರಣಿ, ವಕೀಲರು, ಅರ್ಥಶಾಸ್ತ್ರಜ್ಞರು ಮತ್ತು ಸಮಾಜ ಸುಧಾರಕರಾಗಿದ್ದರು, ದೇಶದ ಪ್ರತಿಯೊಬ್ಬರ ಪಾಲಿಗೆ ಪವಿತ್ರ ಗ್ರಂಥವಾದ ಸಂವಿಧಾನವನ್ನು ನೀಡಿದ ಹಿಂದಿನ ದೊಡ್ಡ ಶಕ್ತಿ, ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಆದರ್ಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಪ್ರೊ.ಛತ್ರದ, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿ ಹಾಗೂ ನಾನಾ ವಿಭಾಗದ ಉಪನ್ಯಾಸಕರು ಸೇರಿದಂತೆ ಬೋಧಕೇತರ ಸಿಬ್ಬಂದಿಗಳು ಇದ್ದರು.