ಕೆ.ಎಂ.ಡಿ.ಸಿ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಅವಕಾಶ
: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ (ಕೆ.ಎಂ.ಡಿ.ಸಿ) 2025-26ನೇ ಸಾಲಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲದ ಯೋಜನೆಯನ್ನು ಅನುಷ್ಠಾನಗೊಳಿಸಲು ಸಿಇಟಿ/ ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್. ಬಿ.ಡಿ.ಎಸ್, ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್‌ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಯೋಜನೆಯಡಿ ಸಾಲ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ. 23 ಕೊನೆಯ ದಿನಾಂಕವಾಗಿದ್ದು, ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಆಸಕ್ತ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್ kmdconline.karnataka.gov. in ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ವಿಧ್ಯಾರ್ಥಿಗಳಿಂದ ಮೂಲ INDEMNITY BOND ನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಛೇರಿಗೆ ಸಲ್ಲಿಸಲು ಮೇ. 28 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಛೆರಿಯ ದೂರವಾಣಿ ಸಂ.08539-225008ಗೆ ಸಂಪರ್ಕಿಸಲು ಕೆ.ಎಂ.ಡಿ.ಸಿ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಛೆರಿಯ ದೂರವಾಣಿ ಸಂ.08539-225008ಗೆ ಸಂಪರ್ಕಿಸಲು ಕೆ.ಎಂ.ಡಿ.ಸಿ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.