Get real time updates directly on you device, subscribe now.
ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುವುದು. ಜಿಲ್ಲೆಯ ಲೀಡ್ ಕಾಲೇಜು ಇದಾಗಿದ್ದು, ಬಿಎ ಪದವಿಯಲ್ಲಿ ಪತ್ರಿಕೋದ್ಯಮ, ಶಿಕ್ಷಣ, ಅರ್ಥಶಾಸ್ತ್ರ, ಇತಿಹಾಸ, ಸಮಾಜಶಾಸ್ತ್ತ, ರಾಜ್ಯಶಾಸ್ತ್ರ, ಕನ್ನಡ, ಇಂಗ್ಲಿಷ್ ಐಚ್ಛಿಕ ವಿಷಯಗಳನ್ನು ನುರಿತ ಬೋಧಕರು ಬೋಧಿಸುವರು. ಪ್ರತಿ ವರ್ಷ ಪ್ರವೇಶಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಮೊದಲು ಬಂದು ಪ್ರವೇಶ ಪಡೆದವರಿಗೆ ಆದ್ಯತೆ ನೀಡಲಾಗುವುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಡಾ.ಡಿ.ಎಚ್. ನಾಯ್ಕ ಪ್ರಾಂಶುಪಾಲರು (ಮೊಬೈಲ್: 94488 77085) ಇವರನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.
Comments are closed.