ಬುಧ್ಧ ಪೂರ್ಣಿಮಾ ಅಂಗವಾಗಿ ಕಾವ್ಯ ಪೂರ್ಣಿಮಾ – 2025
ಕೊಪ್ಪಳ : ತಾಲ್ಲೂಕಿನ ಭಾಗ್ಯನಗರದ ಜ್ಞಾನಬಂಧು ಸಿ.ಬಿ.ಎಸ್.ಇ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ವತಿಯಿಂದ ಬುಧ್ಧ ಪೂರ್ಣಿಮಾ ಅಂಗವಾಗಿ ಕಾವ್ಯ ಪೂರ್ಣಿಮಾ – 2025 ಕಾರ್ಯಕ್ರಮವನ್ನು ಮೇ.12 ರ ಸೋಮವಾರ ರಂದು ರಾತ್ರಿ 7-30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾವ್ಯ ಪೂರ್ಣಿಮಾ – 2025 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಕೆ.ರವಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಎಸ್.ಪಾಟೀಲ, ಪ್ರೋ.ಅಲ್ಲಮಪ್ರಭು ಬೆಟ್ಟದೂರು, ಎ.ಎಂ.ಮದರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭಾಗ್ಯನಗರದ ಜ್ಞಾನಬಂಧು ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ದಾನಪ್ಪ ಕವಲೂರು, ಭಾಗ್ಯನಗರದ ಶಕ್ತಿ ಶಾರದೆಯ ಮೇಳದ ಸಂಚಾಲಕರಾದ ಡಿ.ಎಮ್.ಬಡಿಗೇರ ಅವರು ಉಪಸ್ಥಿತರಿರಲಿದ್ದಾರೆ.
36 ಕ್ಕೂ ಹೆಚ್ಚು ಕವಿಗಳು ಕವಿತೆ ವಾಚನ ಮಾಡಲಿದ್ದಾರೆ. ಶಕುಂತಲಾ ಬೇನಾಳ ಅವರ ತಂಡ ಹಾಗೂ ಭಾಗ್ಯನಗರದ ಜ್ಞಾನಬಂಧು ಸಂಗೀತ ಪಾಠ ಶಾಲೆಯ ತಂಡದವರು ಗೀತಾ ಗಾಯನ ಪ್ರಸ್ತುತ ಪಡಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೋ.ಕೆ.ವಿ.ಪ್ರಸಾದ, ಕೊಪ್ಪಳ ವಿಶ್ವ ವಿದ್ಯಾಲಯದ ಹಣಕಾಸು ಅಧಿಕಾರಿಗಳಾದ ಅಮೀನಸಾಬ, ಗಂಗಾವತಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಡಾ.ಮುಮ್ತಾಜ್ ಬೇಗಂ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಡಾ.ಕೆ.ಎಮ್.ಛತ್ರದ, ಕೊಪ್ಪಳ ವಿಶ್ವ ವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಹಾಗೂ ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ.
Comments are closed.