ಅತಿಥಿ ಉಪನ್ಯಾಸಕ ಮತ್ತು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಮೇ : 2025-26ನೇ ಸಾಲಿಗೆ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ವಸತಿ ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ, ಶಿಕ್ಷಕರ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಕಾರಟಗಿ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಮತ್ತು ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://dom.karnataka.gov.inನಲ್ಲಿ ಅಥವಾ ಶಾಲೆ, ಕಾಲೇಜುಗಳಿಗೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಕಛೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರ ವಸತಿ ಶಾಲೆ, ಕಾಲೇಜು ಅಥವಾ ಮೌಲಾನಾ ಆಜಾದ್ ಶಾಲೆ, ಕಾಲೇಜುಗಳಿಗೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ ಮತ್ತು ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಮೌಲಾನಾ ಆಜಾದ್ ಭವನದ ದೂರವಾಣಿ ಸಂಖ್ಯೆ: 08539-225070, ಕುಷ್ಟಗಿ ಮತ್ತು ಕೊಪ್ಪಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮೊ.ನಂ. 9738467445, ಗಂಗಾವತಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ: 9740346533, ಯಲಬುರ್ಗಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ನಂ. 9611419830ಗೆ ಸಂಪರ್ಕಿಸುವAತೆ ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.