ಮಾವು ಮೇಳದಿಂದ ರೈತರಿಗೆ ಅನುಕೂಲ : ರೆಡ್ಡಿ ಶ್ರೀನಿವಾಸ್

Get real time updates directly on you device, subscribe now.

ಕೊಪ್ಪಳ : ಮಾವು ಮೇಳದಿಂದ ರೈತರಿಗೆ ಅನುಕೂಲವಾಗಲಿದ್ದು ಈ ಮೇಳದಲ್ಲಿ ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದರಿಂದ ಗ್ರಾಹಕರಿಗೆ ಕಡಿಮೆ‌ ದರ‌ ರೈತರಿಗೆ ನೇರ ಮಾರುಕಟ್ಟೆಯಿಂದ ಹೆಚ್ಚಿನ ಲಾಭದ ಅನುಕೂಲವಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು.

   ಅವರು ಮಂಗಳವಾರ ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಇಲಾಖೆ ಉಪನಿರ್ದೆಶಕರ ಕಛೇರಿ ಆವರಣದಲ್ಲಿ ಹಮ್ಮಿಕೊಂಡಿರುವ ಕೊಪ್ಪಳ ಮಾವು ಮೇಳ-2025. ಪ್ರದರ್ಶನ ಹಾಗೂ ಮಾರಾಟ ಮೇಳ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ನಂತರ ಮಾತನಾಡಿ 9ನೇ ವರ್ಷದ ಮಾವು ಮೇಳವನ್ನು ಕಾರ್ಯಕ್ರಮವನ್ನು ಕೊಪ್ಪಳ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮೇ 13 ರಿಂದ 22ರ ವರೆಗೆ ಹತ್ತು ದಿನಗಳ ಕಾಲ ತೋಟಗಾರಿಕೆ ಕಚೇರಿ ಆವರಣದಲ್ಲಿ ನಡೆಯಲಿದೆ, ಮೇಳದಲ್ಲಿ 30ಕ್ಕೂ ಹೆಚ್ಚು ಸ್ಟಾಲ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.ಮಾವಿನ  ಹಣ್ಣುಗಳನ್ನು ಯೋಗ್ಯ ಬೆಲೆಯಲ್ಲಿ ಮಾರಾಟಕ್ಕೆ ಅನುಕೂಲ ಕಲ್ಪಿಸಲಾಗಿದೆ. ಇದರಿಂದ ಗ್ರಾಹಕರಿಗೆ ಇಲ್ಲಿ ಮಾರುಕಟ್ಟೆಗಿಂತಲೂ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಸಿಗಲಿವೆ, ಇಲ್ಲಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಪ್ರದರ್ಶನಕ್ಕಿಡಲಾಗಿದ್ದು, 9ನೇ ವರ್ಷದ ಮಾವು ಮೇಳವನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಅತ್ಯಂತ ಆಸಕ್ತಿಯಿಂದ, ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಪ್ರತಿ ವರ್ಷ ಮೇಳ ಹಮ್ಮಿಕೊಳ್ಳುತ್ತಿರುವುದು ಕಾರ್ಯ ಸಂತಸ ತಂದಿದೆ  ಎಂದರು.

ಈ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ‌ ಕೃಷ್ಣ ಉಕ್ಕುಂದ, ತೋಟಗಾರಿಕೆ ಇಲಾಖೆ ಅಧಿಕಾರಿ ಪ್ರಸಾದ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!