ಗದಗ(ತಳಕಲ್ಲ)-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ ಹಾಗೂ ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ

–
ಕೊಪ್ಪಳ ಮೇ : ನೈಋತ್ಯ ರೈಲ್ವೆ ವಿಭಾಗದ ಗದಗ (ತಳಕಲ್ಲ) ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ ಹಾಗೂ ರೈಲು ಸಂಖ್ಯೆ. 17323 ಕುಷ್ಟಗಿ-ಎಸ್.ಎಸ್.ಎಸ್. ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ ಕಾರ್ಯಕ್ರಮ ಮೇ. 15ರಂದು ಬೆಳಿಗ್ಗೆ 10.30 ಗಂಟೆಗೆ ಕುಷ್ಟಗಿ ರೈಲು ನಿಲ್ದಾಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರಾದ ಡಾ. ಎಂ.ಬಿ.ಪಾಟೀಲ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಅವರು ಭಾಗವಹಿಸುವರು ಎಂದು ನೈಋತ್ಯ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Comments are closed.