ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ

ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು .ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ರಂದು ಕೊಪ್ಪಳ ತಾಲೂಕಿನ ಮುನಿರಾಬಾದ ಡ್ಯಾಂ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜರುಗಿತು.
ಗೃಹಲಕ್ಷ್ಮೀ ಯೋಜನೆಯ ಕುರಿತು ಸಭೆಯಲ್ಲಿ ಫಲಾನುಭವಿಗಳಿಗೆ ಹಣ ಜಮೆಯಾಗದೆ ಇದ್ದಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ಗಮನಕ್ಕೆ ತಂದು ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಅಧ್ಯಕ್ಷರು, ಸದಸ್ಯರು ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ತಿಳಿಸಿದರು.
ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿದಿರುವ ಮಾಹಿತಿಯುಳ್ಳ ನಾಮಫಲಕಗಳನ್ನು ಅಳವಡಿಸಿರುವದಿಲ್ಲವೆಂದು ಸದಸ್ಯರು ಸಭೆಯಲ್ಲಿ ತಿಳಿಸಿದಾಗ ಅಧ್ಯಕ್ಷರು ಕೂಡಲೇ ಅಳವಡಿಸಲು ಕ್ರಮವಹಿಸಬೇಕೆಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು. ಏಪ್ರಿಲ್ ಮಾಹೆಯಲ್ಲಿ ತಾಲೂಕ ಪಂಚಾಯತಿಯಲ್ಲಿ ಜರುಗಿದ ನ್ಯಾಯಬೆಲೆ ಅಂಗಡಿಗಳ ಸನದುದಾರರ ಸಭೆಗೆ ಹಾಜರಾಗದ ಸನದುದಾರರಿಗೆ ಆಹಾರ ಇಲಾಖೆಯಿಂದ ನೋಟಿಸ್ ನೀಡುವಂತೆ ಸಭೆಯಲ್ಲಿ ಸದಸ್ಯರು ತಿಳಿಸಿದರು. ಪಂಚ ಗ್ಯಾರಂಟಿ ಯೋಜನೆಗಳ ಪ್ರತಿ ಫಲಾನುಭವಿಗೆ ತಲುಪುವಂತೆ ಹಾಜರಿದ್ದ ಎಲ್ಲಾ ಸದಸ್ಯರು, ಅನುಷ್ಠಾನ ಅಧಿಕಾರಿಗಳಿಗೆ ಸಭೆಯ ಅಧ್ಯಕ್ಷರು ಸೂಚಿಸಿದರು.
ಕೊಪ್ಪಳದಿಂದ ಹೊಸಪೇಟೆಗೆ ಹೋಗುವ ಎಲ್ಲಾ ಬಸ್ಸುಗಳು ಮುನಿರಾಬಾದ ಬಸ್ ನಿಲ್ದಾಣಕ್ಕೆ ಕಡ್ಡಾಯವಾಗಿ ಬರುವಂತೆ ಸಭೆಯಲ್ಲಿ ಅಧ್ಯಕ್ಷರು ಕಲ್ಯಾಣ ಕರ್ನಾಟಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಊರ ಮುಂದಿನ ಪಿಳ್ಳೆ ಹೋಟೆಲ್ ಮುಂದುಗಡೆ ಬಸ್ ಕೋರಿಕೆಯ ನಿಲುಗಡೆ ಮಾಡಬೇಕೆಂದು ಸದಸ್ಯರು ತಿಳಿಸಿದರು.
ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳಿಕೊಮ್ಮೆ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿತ್ತು. ಸ್ವಲ್ಪ ಬದಲಾವಣೆ ಮಾಡಿ ಪ್ರತಿ 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡಿಕೊಳ್ಳುವುದು ಕಡ್ಡಾಯ ವಾಗಿರುತ್ತದೆಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ಮುನಿರಾಬಾದ ಡ್ಯಾಂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಆಯೂಬ್ ಖಾನ್, ಉಪಾಧ್ಯಕ್ಷೆ ಸೌಭಾಗ್ಯ ನಾಗರಾಜ, ಸಮಿತಿಯ ಸದಸ್ಯರಾದ ದೇವರಾಜ ನಡುವಿನಮನಿ, ರಮೇಶ ಹ್ಯಾಟಿ, ಜ್ಯೋತಿ ಗೊಂಡಬಾಳ, ಸವಿತಾ ಗೊರಂಟ್ಲಿ, ಅನ್ನದಾನಸ್ವಾಮಿ, ಮೆಹಬೂಬಪಾಷಾ ಮಾನ್ವಿ, ಅನ್ವರ್ ಹುಸೇನ್ ಗಡಾದ ಪರಶುರಾಮ ಕೊರವರ, ಧರ್ಮರಾಜರಾವ್, ಲಕ್ಷ್ಮಣ ಡೊಳ್ಳಿನ, ಹಾಗು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು, ಮುನಿರಾಬಾದ್ ಡ್ಯಾಂ ಗ್ರಾಮ ಪಂಚಾಯತ ಪಿಡಿಒ ಮಹೇಶ್ ಸಜ್ಜನ, ತಾಲೂಕ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.
Comments are closed.