ಭಾಗ್ಯನಗರ ಪಟ್ಟಣ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲು ಸಭೆೆ ನಿರ್ಣಯ

ಭಾಗ್ಯನಗರ : ಭಾಗ್ಯನಗರ ಪಟ್ಟಣ ದಿನದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಈಗಿರುವ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸರಕಾರವನ್ನು ಆಗ್ರಹಿಸಲು ಭಾಗ್ಯನಗರ ಪಟ್ಟಣ ಪಂಚಾಯತ್ ಸದಸ್ಯರು ನಿರ್ಣಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ.
ಗುರುವಾರದಂದು ಭಾಗ್ಯನಗರ ಪಟ್ಟಣ ಪಂಚಾಯಿತಿಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಕೂಡಿ ಭಾಗ್ಯನಗರ ದಿನದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಸಮಗ್ರ ಅಭಿವೃದ್ದಿಗಾಗಿ ಈಗಿರುವ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದರೆ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಲು ಸಾದ್ಯ. ಇದಕ್ಕಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಭಾಗ್ಯನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ತುಕಾರಾಮಪ್ಪ ಗಡಾದ, ಉಪಾಧ್ಯಕ್ಷ ಹೊನ್ನೂರ್ ಸಾಬ್ ಬೈರಾಪುರ, ಸರ್ವ ಸದಸ್ಯರು, ಮುಖ್ಯಾಧಿಕಾರಿ ಸುರೇಶ್ ಬಬಲಾದಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Comments are closed.